
ನವದೆಹಲಿ, ಮಾ.೧೩- ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಚಿಯಾನ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ
ಈ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು, ಜೀವ ಕಳೆದುಕೊಳ್ಳುತ್ತಿರುವ ಮುಗ್ಧ ನಾಗರಿಕರು ಮತ್ತು ಮೂಲಸೌಕರ್ಯ ನಾಶ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಜತೆಗೆ ಭಾರತೀಯ ನಾಗರಿಕರ ಸುರಕ್ಷೆ, ಅಡೆತಡೆ ಇಲ್ಲದೆ ಸರಕು ಹಾಗೂ ಇಂಧನ ಸಾಗಣೆಯು ಭಾರತದ ಪ್ರಮುಖ ಆದ್ಯತೆಯಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರಮೋದಿ ಅವರು’ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜಶ್ಚಿಯಾನ್ ಜತೆ ಮಾತುಕತೆ ನಡೆಸಿದ್ದು ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಮಾತುಕತೆ ನಡೆಯಿತು ಎಂದಿದ್ದಾರೆ.
ಪರಿಸ್ಥಿತಿ ಹದಗೆಡುತ್ತಿರುವುದರ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ನಾಗರಿಕರು ಮತ್ತು ಮೂಲಸೌಕರ್ಯ ಆಗಿರುವ ನಷ್ಟದ ಕುರಿತು ಕವಳ ವ್ಯಕ್ತಪಡಿಸಿದೆ’ ಎಂದಿದ್ದಾರೆ.
‘ಶಾಂತಿ ಮತ್ತು ಸ್ಥಿರತೆ ಕಾಪಾಡುವಲ್ಲಿ ಭಾರತದ ಬದ್ಧತೆ ಮತ್ತು ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದ ಮೂಲಕ ಬಿಕ್ಕಟ್ಟು ಶಮನಗೊಳಿಸುವಂತೆ ಒತ್ತಿ ಹೇಳಲಾಯಿತು’ ಎಂದಿದ್ದಾರೆ
ಇರಾನ್‌ನ ಸದ್ಯದ ಪರಿಸ್ಥಿತಿ ಮತ್ತು ಪ್ರಾಂತ್ಯದಲ್ಲಿನ ಸದ್ಯದ ಬೆಳವಣಿಗೆ ಕುರಿತು ಇರಾನ್ ಅಧ್ಯಕ್ಷ ಡಾ. ಮಸೂದ್ ಅವರು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು. ನಿರಂತರವಾಗಿ ಜತೆಗೂಡಿರಲು ಉಭಯ ನಾಯಕರು ಸಮ್ಮತಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹಡಗು ಮೂಲಕ ಭಾರತಕ್ಕೆ ಅಗತ್ಯವಿರುವ ಇಂಧನ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದೆ. ಎರಡು ದಿನಗಳ ಹಿಂದೆ ಭಾರತದತ್ತ ಹೊರಟಿದ್ದ ಬೃಹತ್ ಹಡಗೊಂದು ಹೊರ್ಮುಜ್ ಜಲಸಂಧಿಯಲ್ಲಿ ಸಾಗುವಾಗ ಅದರ ಮೇಲೆ ಇರಾನ್ ಪಡೆಗಳು ದಾಳಿ ನಡೆಸಿದ್ದವು. ಈ ನಿಟ್ಟಿನಲ್ಲಿ ಈ ಮಾತುಕತೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕವು ಜಂಟಿ ದಾಳಿ ಆರಂಭಿಸಿ ಅಲ್ಲಿನ ಸರ್ವೋಚ್ಛ ನಾಯಕ ಅಲಿ ಖಮೇನಿ ಅವರನ್ನು ಹತ್ಯೆಗೈದಿದೆ. ಇದಕ್ಕೆ ಪ್ರತೀಕಾರವಾಗಿ ಇರಾನ್ ಸೇನಾ ದಾಳಿಯನ್ನು ಮುಂದುವರಿಸಿದೆ. ಇಸ್ರೇಲ್ ಮತ್ತು ಅಮೆರಿಕ ಸೇನಾ ನೆಲೆಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ.
.
ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕವು ಜಂಟಿ ದಾಳಿ ಆರಂಭಿಸಿ ಅಲ್ಲಿನ ಸರ್ವೋಚ್ಛ ನಾಯಕ ಅಲಿ ಖಮೇನಿ ಅವರನ್ನು ಹತ್ಯೆಗೈದಿದೆ. ಇದಕ್ಕೆ ಪ್ರತೀಕಾರವಾಗಿ ಇರಾನ್ ಸೇನಾ ದಾಳಿಯನ್ನು ಮುಂದುವರಿಸಿದೆ. ಇಸ್ರೇಲ್ ಮತ್ತು ಅಮೆರಿಕ ಸೇನಾ ನೆಲೆಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿಯನ್ನು ಇರಾನ್ ಮುಂದುವರಿಸಿದೆ.
ದುಬೈ ಮತ್ತು ದೋಹಾಗಳಿಗೆ ನಾಗರಿಕ ವಿಮಾನಯಾನ ನಿಂತಿದ್ದು ಜಾಗತಿಕ ವ್ಯವಹಾರ ಸ್ಥಗಿತಗೊಂಡಿದೆ. ಈ ನಿಟ್ಟಿನಲ್ಲಿ ಕಳೆದ ಹತ್ತು ದಿನಗಳಲ್ಲಿ ಪಶ್ಚಿಮ ಏಷ್ಯಾದ ವಿವಿಧ ರಾಷ್ಟ್ರಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ್ದಾರೆ.
ಕೊಲ್ಲಿ ಮತ್ತು ಪಶ್ಚಿಮ ಏಷ್ಯಾದಲ್ಲಿ ಸುಮಾರು ಒಂದು ಕೋಟಿ ಭಾರತೀಯರು ನೆಲೆಸಿದ್ದಾರೆ. ಇರಾನ್‌ನಲ್ಲಿ ವಿದ್ಯಾಭ್ಯಾಸ ಮತ್ತು ನೌಕರಿಗಾಗಿ ಸುಮಾರು ೧೦ ಸಾವಿರ ಜನ ನೆಲೆಸಿದ್ದಾರೆ. ಇಸ್ರೇಲ್‌ನಲ್ಲಿ ೪೦ ಸಾವಿರ ಜನ ಕೆಲಸ ಮಾಡುತ್ತಿದ್ದಾರೆ






























