
ಕಲಬುರಗಿ,ಮೇ.3-ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಬ್ಯಾಚಿನ ಐಎಎಸ್ ಅಧಿಕಾರಿ ಮೊಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ಸರಕಾರ ನೇಮಕ ಮಾಡಿದೆ.
ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸುಮಾರು ಎರಡೂವರೆ ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಫೌಜಿಯಾ ತರನ್ನುಮ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು.
ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ಇದುವರೆಗೆ ಹಣಕಾಸು ಇಲಾಖೆಯ ಬಜೆಟ್ ಮತ್ತು ಸಂಪನ್ಮೂಲ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.






















