೨೪ ತಾಸಿನಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ,ಮೇ ೨೪- ಈ ವರ್ಷ ಕೇರಳದಲ್ಲಿ ಮುಂದಿನ ೨೪ ಗಂಟೆಗಳಲ್ಲಿ ಮುಂಗಾರು ಪ್ರವೇಶ ಮಾಡಲಿದ್ದು ಕಳೆದ ೧೬ ವರ್ಷಗಳ ಬಳಿಕ ನಿಗದಿತ ಸಮಯಕ್ಕಿಂತ ಬೇಗ ಆರಂಭವಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಕೊನೆಯ ಬಾರಿಗೆ ೨೦೦೯ ಮತ್ತು ೨೦೦೧ ರಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಬೇಗ ಕಾಣಿಸಿಕೊಂಡಿತ್ತು. ಮುಂದಿನ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ಮೊದಲ ಮಳೆ ಕಾಣಸಿಕೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.


ಮುಂಗಾರು ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ನಿರ್ಮಾಣವಾಗಿದ್ದು ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮುಂಗಾರು ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.


ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಮಳೆ ಬರುವ ದಿನಾಂಕ ಜೂನ್ ೧. ಆದಾಗ್ಯೂ, ಮೊದಲು ದಾಖಲಾದ ದಿನಾಂಕ ೧೯೧೮ ರ ಮೇ ೧೧ ರಂದು ಆಗಿತ್ತು. ಮತ್ತೊಂದೆಡೆ, ತಡವಾಗಿ ಮಳೆ ಬಂದ ದಾಖಲೆ ೧೯೭೨ ರಲ್ಲಿತ್ತು, ಆಗ ಜೂನ್ ೧೮ ರ ಹೊತ್ತಿಗೆ ಮಳೆ ಪ್ರಾರಂಭವಾಗಿತ್ತು.


ಕಳೆದ ೨೫ ವರ್ಷಗಳಲ್ಲಿ, ಅತ್ಯಂತ ವಿಳಂಬವಾದ ಆಗಮನ ೨೦೧೬ ರಲ್ಲಿ ಸಂಭವಿಸಿತ್ತು ಜೂನ್ ೯ ರಂದು ಮುಂಗಾರು ಕೇರಳವನ್ನು ಪ್ರವೇಶಿಸಿತ್ತು ಎಂದು ದಕ್ಷಿಣ ರಾಜ್ಯಗಳಲ್ಲಿ, ಭಾರತ ಹವಾಮಾನ ಇಲಾಖೆ ತಿಳಿಸಿದೆ.


ಕೇರಳ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೊಂಕಣ ಮತ್ತು ಗೋವಾದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.


ಮೇ ೨೯ ರವರೆಗೆ ಕೇರಳ ಮತ್ತು ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ ೪೦-೫೦ ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ವರದಿಯ ಪ್ರಕಾರ, ಮುಂಬೈನಲ್ಲಿ ಗುಡುಗು ಸಹಿತ ಮಳೆಯಾಗಬಹುದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು ಮತ್ತು ಗಂಟೆಗೆ ೪೦ ರಿಂದ ೫೦ ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ತಿಳಿಸಿದೆ.


ಭಾನುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ, ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆಯಾಗಿ ನದಿಗಳು ಮತ್ತು ಜಲಪಾತಗಳಿಗೆ ಹೋಗದಂತೆ ಜನರು ರಾಜ್ಯ ಸರ್ಕಾರವನ್ನು ಕೋರಿದೆ. ಕಳೆದ ೨೪ ಗಂಟೆಗಳಲ್ಲಿ ಕರಾವಳಿ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.


ಮುಂದಿನ ಎರಡು ಗಂಟೆಗಳಲ್ಲಿ ದಕ್ಷಿಣ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ-ಎನ್‌ಸಿಆರ್‌ಗೆ ಕಿತ್ತಳೆ ಎಚ್ಚರಿಕೆಯನ್ನು ಸಹ ನೀಡಲಾಗಿದೆ, ಬಿರುಗಾಳಿಯ ವೇಗ ಗಂಟೆಗೆ ೭೦ ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾದ್ಯತೆ ಇದೆ ಎಂದು ಹೇಳಿದೆ.


ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.


ಮೇ ೨೫ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೆಳಗಾವಿ, ಧಾರವಾಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.


ಮೇ ೨೬ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು, ಧಾರವಾಡ, ಕಲಬುರಗಿ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ.


ಮೇ ೨೭ ಮತ್ತು ೨೮ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ.


ವಿಜಯನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.