
ವಿಜಯಪುರ,ಮಾ. 18:ಹೊಟೇಲ್‍ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ ಮೇಲೆ ದಾಳಿ ನಡೆಸಿ 15ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.
ನಗರದ ಸೊಲ್ಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು 15 ಗೃಹ ಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್‍ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಮಾಡುವ ಹೊಟೇಲ್ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ್ ಗುಮಶೆಟ್ಟಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.



























