
ಯಾದಗಿರಿ:ಮೇ.೧೯: ತಾಲೂಕಿನ ಹತ್ತಿಕುಣಿ ಹೋಬಳಿಯ ಮೋಟನಹಳ್ಳಿ ಹೊರವಲಯದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪುಂಡರು ಹಾಗೂ ಕುಡುಕರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದರು.
ಸ್ಥಳಕ್ಕೆ ಭೇಟಿ ನೀಡಿ ವಸತಿ ಶಾಲೆಯ ಕೊಠಡಿಗಳು ಹಾಗೂ ಕಟ್ಟಡದ ಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಸುಮಾರು ?೨ ಕೋಟಿ ೯೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಈ ಶಾಲೆ ೧೫ ಆಗಸ್ಟ್ ೨೦೦೯ರಂದು ಆರಂಭವಾಗಿತ್ತು. ನಂತರ ಕಟ್ಟಡ ಜೀರ್ಣಾವಸ್ಥೆಗೆ ತಲುಪಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ೨೦೨೧ರ ನವೆಂಬರ್ ತಿಂಗಳಲ್ಲಿ ಬಂದಳ್ಳಿ ಗ್ರಾಮದ ವಸತಿ ನಿಲಯಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿತ್ತು. ಆದರೆ ಸ್ಥಳಾಂತರಗೊAಡು ಹಲವು ವರ್ಷಗಳಾದರೂ ಶಾಲೆಯ ದುರಸ್ತಿ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವು ಎರಡು ವರ್ಷಗಳ ಹಿಂದೆ ಶಾಲೆಯ ಅಭಿವೃದ್ಧಿ ಹಾಗೂ ದುರಸ್ತಿಗಾಗಿ ಸುಮಾರು ?೨ ಕೋಟಿ ೯೦ ಲಕ್ಷ ಅನುದಾನ ಮಂಜೂರು ಮಾಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಇದಕ್ಕೆ ಸಂಬAಧಿಸಿದ ಅಧಿಕಾರಿಗಳ ಕಳ್ಳಾಟವೇ ಕಾರಣ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ ಎಂದು ದೂರಿದರು.
ಪ್ರಸ್ತುತ ಶಾಲೆಯ ಕಟ್ಟಡ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ಅನೈತಿಕ ಚಟುವಟಿಕೆಗಳ ತಾಣವಾಗಿರುವುದಲ್ಲದೆ, ಒಳಗಿದ್ದ ಫ್ಯಾನ್, ಲೈಟ್, ಬಟನ್, ಕಿಟಕಿ, ಬಾಗಿಲು, ಮುಖ್ಯ ಗೇಟ್, ನೀರಿನ ಮೋಟರ್ ಸೇರಿದಂತೆ ಹಲವು ಸಾಮಗ್ರಿಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವುದಾಗಿ ಆರೋಪಿಸಿದರು. ಈ ಕುರಿತು ಸಂಬAಧಪಟ್ಟ ಅಧಿಕಾರಿಗಳು ಮೇಲಧಿಕಾರಿಗಳಿಗಾಗಲಿ, ಪೊಲೀಸ್ ಠಾಣೆಗಾಗಲಿ ದೂರು ನೀಡದಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಟೀಕಿಸಿದರು.
ಪ್ರಸ್ತುತ ಈ ಶಾಲೆಯಲ್ಲಿ ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಸಮರ್ಪಕ ಮೂಲಸೌಕರ್ಯಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
ಒಂದು ವಾರದೊಳಗೆ ಶಾಲೆಯ ದುರಸ್ತಿ ಕಾಮಗಾರಿಯನ್ನು ತಕ್ಷಣ ಆರಂಭಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಈ ಭಾಗದ ರೈತರೊಂದಿಗೆ ಸೇರಿ ಪಾಳುಬಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗದ ಯಾದಗಿರಿ-ಸೇಡಂ ಮುಖ್ಯರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಖಡಕ್ ಎಚ್ಚರಿಕೆ ನೀಡಿದರು.
“ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ವಸತಿ ನಿಲಯದ ಸಾಮಗ್ರಿಗಳನ್ನು ಕಳ್ಳತನ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸರ್ಕಾರಕ್ಕೆ ಉಂಟಾದ ನಷ್ಟವನ್ನು ಅವರಿಂದಲೇ ವಸೂಲಿ ಮಾಡಬೇಕು. ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಉಮೇಶ ಕೆ. ಮುದ್ನಾಳ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಮೇಶ್ ಬೈರಂಕೊAಡ, ಭೀಮಾಶಂಕರ, ಮಲ್ಲೇಶಿ, ಪವನ, ಯಕ್ಬಾಲ್, ವಸಂತ ಸೇರಿದಂತೆ ಉಮೇಶ ಕೆ. ಮುದ್ನಾಳ್ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.





















