
ವಿಜಯಪುರ, ಮಾ.27- ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಕೂಡ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲುಕುವ ಘಟನೆ
ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ.
ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕರ ಹಳ್ಳೂರ (31) ಮೃತ ದುರ್ದೈವಿ. ಇವರು ತಮ್ಮ ಮಕ್ಕಳಾದ ತನುಶ್ರೀ (7), ಅನುಶ್ರೀ (5) ಹಾಗೂ ಕೇವಲ 10 ತಿಂಗಳ ಹಸುಳೆ ಸಂತೋಷ್‍ನನ್ನು ಬಾವಿಗೆ ಎಸೆದು ಕೊಂದು ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜಶ್ರೀ ಅವರ ಪತಿ ಶಂಕರ್ ಅವರು ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಘಟನೆ ನಡೆದ ಸಮಯದಲ್ಲಿ ಅವರು ಊರಿನಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಜಶ್ರೀ ಇಂತಹ ಕೃತ್ಯ ನಡೆಸಿದ್ದಾರೆ.
ಗ್ರಾಮದ ಸಮೀಪವಿರುವ ಬಾವಿಯಲ್ಲಿ ಇಬ್ಬರು ಮಕ್ಕಳ ಶವಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಇಂಡಿ ಗ್ರಾಮೀಣ ಪೆÇಲೀಸರು, ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮೂವರು ಮಕ್ಕಳ ಸಾವಿನ ಸುದ್ದಿ ದೃಢಪಟ್ಟಿದೆ.




















