ಮಕ್ಕಳಿಬ್ಬರನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು,ಅ.೧೦- ಐದು ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬಾಗಲಗುಂಟೆಯ ಭುವನೇಶ್ವರಿನಗರದಲ್ಲಿ ಸಂಭವಿಸಿದೆ.


ನಾಲ್ಕು ವರ್ಷದ ಪುತ್ರಿ ಬೃಂದಾ ಹಾಗೂ ಒಂದೂವರೆ ವರ್ಷದ ಭುವನ್ ಕೊಂದು ತಾಯಿ ವಿಜಯಲಕ್ಷ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಐದು ವರ್ಷದ ಹಿಂದೆ ವಿಜಯಲಕ್ಷ್ಮಿ, ರಮೇಶ್ ಜೊತೆ ಮದುವೆ ಮಾಡಿಕೊಂಡಿದ್ದರು ಆಕೆಯ ಪತಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಲ್ಲಿ ನೆಲೆಸಿದ್ದ ಈ ದಂಪತಿಗೆ ೪ ವರ್ಷದ ಬೃಂದಾ, ಒಂದೂವರೆ ವರ್ಷದ ಭುವನ್ ಎಂಬ ಇಬ್ಬರು ಮಕ್ಕಳಿದ್ದರು. ಇವರ ಸಂಸಾರದಲ್ಲಿ ಕೆಲ ಸಮಸ್ಯೆಗಳಿದ್ದವು, ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಿನ್ನೆ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೀಗಾಗಿ ಪದೇ ಪದೆ ಕುಟುಂಬದಲ್ಲಿ ಜಗಳ ಆಗುತ್ತಿತ್ತು.


ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೀಗಾಗಿ ಪದೇ ಪದೆ ಕುಟುಂಬದಲ್ಲಿ ಜಗಳ ಆಗುತ್ತಿತ್ತು. ಈ ವಿಚಾರ ವಿಜಯಲಕ್ಷ್ಮಿ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳು ಎನ್ನಲಾಗುತ್ತಿದೆ.ಇದರಿಂದಲೇ ನೊಂದು ತನ್ನ ಮಕ್ಕಳನ್ನು ಕೊಂದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.