Home ಜಿಲ್ಲೆ ಕಲಬುರಗಿ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ

ಅಳಂದ,ಅ.1: ಆಳಂದ ತಾಲೂಕಿನ ಇಕ್ಕಳಕಿ ಗ್ರಾಮದಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜರುಗಿದೆ.
ತಾಯಿ ಗೌರಮ್ಮ ತಳಕೇರಿ (52) ಮತ್ತು ಮಕ್ಕಳಾದ ಭಾಗ್ಯಶ್ರೀ ತಳಕೇರಿ (25) ಅಂಬಿಕಾ ತಳಕೇರಿ (21) ಆತ್ಮಹತ್ಯೆ ಮಾಡಿಕೊಂಡವರು.
ಪತಿ ಪೀರಪ್ಪ ತಳಕೇರಿ ಅವರೊಂದಿಗೆ ಸಾಲದ ವಿಷಯವಾಗಿ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಮಾದನಹಿಪ್ಪರಗಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಜಾರಿಯಲ್ಲಿದೆ.