Home ಜಿಲ್ಲೆ ಬರ ಘೋಷಣೆಗಾಗಿ ಆಗ್ರಹಿಸಿ ಮುದ್ದೇಬಿಹಾಳ ಬಂದ್ ಯಶಸ್ವಿ

ಬರ ಘೋಷಣೆಗಾಗಿ ಆಗ್ರಹಿಸಿ ಮುದ್ದೇಬಿಹಾಳ ಬಂದ್ ಯಶಸ್ವಿ

ಮುದ್ದೇಬಿಹಾಳ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಬಂದ್ ಮೂಲಕ ಮುಂದುವರಿಸಲಾಯಿತು. ಬಂದ್‌ಗೆ ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಬಹುತೇಕ ಎಲ್ಲ ಅಂಗಡಿ-ಮುAಗಟ್ಟುಗಳು ಬೆಳಗ್ಗೆಯಿಂದಲೇ ಮುಚ್ಚಿದ್ದವು. ಮಾಂಸ, ಮದ್ಯ ಮಾರುಕಟ್ಟೆ, ಸರಾಫ್ ಬಜಾರ್, ಎಪಿಎಂಸಿ, ಕಿರಾಣಿ, ಅಡತ್ ಮರ್ಚಂಟ್, ತರಕಾರಿ, ಹಣ್ಣು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು.
ಬಸ್ ಸಂಚಾರ ಸ್ಥಗಿತ, ಬಿಕೋ ಎನ್ನುತ್ತಿದ್ದ ಬಸ್ ನಿಲ್ದಾಣ:
ಬಂದ್ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ ಬಸ್ ಸಂಚಾರವೂ ಸ್ಥಗಿತಗೊಂಡಿದ್ದರಿAದ ಮುದ್ದೇಬಿಹಾಳ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಪ್ರತಿದಿನ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ಬಸ್ ನಿಲ್ದಾಣದಲ್ಲಿ ಬಸ್‌ಗಳ ಸಂಚಾರ ಹಾಗೂ ಪ್ರಯಾಣಿಕರ ಓಡಾಟ ಇಲ್ಲದೆ ಖಾಲಿ ಖಾಲಿಯಾಗಿ ಕಂಡುಬAತು.
ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಬಸ್‌ಗಳಿಲ್ಲದೆ ಪರದಾಡುವಂತಾಯಿತು. ಅನಿವಾರ್ಯವಾಗಿ ಕೆಲವರು ಆಟೋಗಳ ಮೊರೆ ಹೋಗಬೇಕೆಂದರೂ ಅವೂ ಸಹಿತ ಬಂದ್ ಇದ್ದಿದ್ದರಿಂದ ಆಟೋಗಳ ಸಂಚಾರ, ಟೆಂಪೋ ಟ್ರಾö್ಯಕ್ಸ್ ಸಂಚಾರವೂ ಸ್ಥಗಿತಗೊಂಡಿದ್ದರಿAದ ಖಾಸಿ ವಾಹನಗಳ ಮೇಲೆ ಅವಲಂಬಿತ ಪ್ರಯಾಣಿಕರಿಗೂ ತೊಂದರೆಯುAಟಾಯಿತು. ಶಾಲಾ ಮಕ್ಕಳು, ಕಾರ್ಮಿಕರು, ಶಿಕ್ಷಕರು ಸೇರಿದಂತೆ ವಿವಿಧ ವರ್ಗದ ಜನರು ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದ್ದರಿAದ ತೊಂದರೆ ಅನುಭವಿಸುವಂತಾಯಿತು.
ಕೆಲವು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸ್ವಯಂಪ್ರೇರಿತವಾಗಿ ಶಾಲೆಗಳಿಗೆ ರಜೆ ಘೋಷಿಸಿ, ಶಾಲಾ ವಾಹನಗಳ ಮೂಲಕ ಮಕ್ಕಳನ್ನು ಮನೆಗಳಿಗೆ ಕಳುಹಿಸುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದವು.
ಬೃಹತ್ ಪ್ರತಿಭಟನಾ ಮೆರವಣಿಗೆ:
ಬನಶಂಕರಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸುತ್ತಾ ಬಸವೇಶ್ವರ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಎ.ಎಸ್. ಪಾಟೀಲ ನಡಹಳ್ಳಿ ಅವರು ರೈತರನ್ನುದ್ದೇಶಿಸಿ ಮಾತನಾಡಿ ನಂತರ ವಾಪಸ್ ಹಳೆ ತಹಶೀಲ್ದಾರ್ ಕಚೇರಿ ಆವರಣದ ಸೈನಿಕ ಮೈದಾನದಲ್ಲಿ ಸಭೆಯಾಗಿ ಮಾರ್ಪಟ್ಟಿತು.
ಈ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಮುಖಂಡರಾದ ಮಲಕೇಂದ್ರಗೌಡ ಪಾಟೀಲ, ಎಂ.ಎಸ್. ಪಾಟೀಲ, ಎಂ.ಬಿ. ಅಂಗಡಿ, ಮಲ್ಲಯ್ಯ ಬಿರಾದಾರ, ಗುರುನಾಥಗೌಡ ಬಿರಾದಾರ, ಕೆಂಚಪ್ಪ ಬಿರಾದಾರ, ಗಿರೀಶಗೌಡ ಪಾಟೀಲ, ಸಂಗೂ ಹತ್ತಿ, ಲಕ್ಷ÷್ಮಣ ಬಿಜ್ಜೂರ, ಸಂಗಮ್ಮ ದೇವರಳ್ಳಿ, ಗೌರಮ್ಮ ಹುನಗುಂದ, ಶಿವು ಕನ್ನೊಳ್ಳಿ, ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಿಕಾರ್ಜುನ ತಂಗಡಗಿ, ಹರೀಶ ನಾಟೀಕಾರ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ರೈತರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸರ್ಕಾರದ ಮೇಲೆ ಒತ್ತಡ ಹೇರಲು ರೈತರ ಒಗ್ಗಟ್ಟು:
ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದ ಪಟ್ಟಣದ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ನೀಡಿದರು. ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಎರಡೂ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಯಾವದೇ ತರಹದ ಅಹಿತಕರ ಘಟನೆ ಜರುಗದಂತೆ ಡಿಎಸ್‌ಪಿ ನಂದಾರೆಡ್ಡಿ, ಸಿಪಿಐ ಮೊಹ್ಮದ್ ಫಸಿವುದ್ದೀನ್ ಹಾಗೂ ಪಿಎಸ್‌ಐ ವಿಜಯಕುಮಾರ ತಳವಾರ ಅವರ ನೇತೃತ್ವದಲ್ಲಿ ಆಲಮಟ್ಟಿ ಪಿಎಸ್‌ಐ ಇಂಡೀಕರ, ನಿಡಗುಂದಿ ಪಿಎಸ್‌ಐ ಯತೀಂದ್ರ, ಕೂಡಗಿ ಮಲ್ಲಿಕಾರ್ಜುನ, ಮುದ್ದೇಬಿಹಾಳ ಅಫರಾಧ ವಿಭಾಗದ ಪಿಎಸ್‌ಐ ಆರ್.ಎಸ್. ಭಂಗಿ ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಪೊಲೀಸ್ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.