Home ಜಿಲ್ಲೆ ಬಹುಭಾಷಾ ಜ್ಞಾನ ವಿದ್ಯಾರ್ಥಿಗಳ ಪ್ರಗತಿಗೆ ಕೀಲಿಕೈ: ದೀಪಕ್ ಶಿಂತ್ರೆ

ಬಹುಭಾಷಾ ಜ್ಞಾನ ವಿದ್ಯಾರ್ಥಿಗಳ ಪ್ರಗತಿಗೆ ಕೀಲಿಕೈ: ದೀಪಕ್ ಶಿಂತ್ರೆ

ಸಂಜೆವಾಣಿ ವಾರ್ತೆ,
ವಿಜಯಪುರ , ಸೆ. ೧೩: ಮರಾಠಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಿಸುವುದರೊAದಿಗೆ ಕನ್ನಡ ಭಾಷೆಯನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಬಹುಭಾಷಾ ಜ್ಞಾನವು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಪ್ರಗತಿಗೆ ಪೂರಕವಾಗಲಿದೆ ಎಂದು ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷ ದೀಪಕ್ ಶಿಂತ್ರೆ ಹೇಳಿದರು.
ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಮರಾಠಿ ವಿದ್ಯಾಲಯದಲ್ಲಿ ‘ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳು’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ‘ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಿರಿ’ ವಿಷಯದ ಕುರಿತು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ದೀಪಕ್ ಶಿಂತ್ರೆ, ವಿದ್ಯಾರ್ಥಿಗಳು ತಮ್ಮ ಮಾತೃಭಾಷೆಯೊಂದಿಗೆ ಕನ್ನಡ ಸೇರಿದಂತೆ ಇತರ ಭಾಷೆಗಳ ಜ್ಞಾನವನ್ನೂ ಬೆಳೆಸಿಕೊಳ್ಳಬೇಕು. ಭಾಷಾ ಜ್ಞಾನವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಭವಿಷ್ಯದ ಅವಕಾಶಗಳನ್ನು ವಿಸ್ತರಿಸುತ್ತದೆ ಎಂದು ಹೇಳಿದರು.
ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಜೆ. ಜಹಾಗೀರದಾರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಓದುವ ಸಂಸ್ಕೃತಿ ಜ್ಞಾನವೃದ್ಧಿಗೆ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಅತಿಥಿ, ಕವಿ ಮಾರುತಿ ತರಸೆ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಮುಖ್ಯೋಪಾಧ್ಯಾಯ ಎ.ವಿ. ದಂಡಗೆ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ಸಹಕಾರ್ಯವಾಹ ಶ್ರೀಮತಿ ಲತಾತಾಯಿ ಝಿಂಗಾಡೆ, ಖಜಾಂಚಿ ಕನ್ನಯ್ಯ ಪೇಠಕರ, ಶ್ರೀಪಾದ ಪಾಟಣಕರ ಹಾಗೂ ಶ್ರೀಮತಿ ಅಂಜಲಿ ಗಿರಗಾಂವಕರ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ರೂಪಾ ಹಿಬಾರೆ ಕಾರ್ಯಕ್ರಮ ನಿರೂಪಿಸಿದರು.