ಕೋಲಾರ:೧- ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸುವಂತೆ ಸಾಕಷ್ಟು ಸಭೆಗಳಲ್ಲಿ ಸೂಚನೆ ನೀಡಿದರು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುಷ್ಠಾನವಾಗುತ್ತಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವೇಮಗಲ್ ವಿ.ಎಂ ಮುನಿಯಪ್ಪ ಬೇಸರ ವ್ಯಕ್ತಪಡಿಸಿದರು
ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಈ ಸ್ಥಾನದಲ್ಲಿ ಕೂರಿಸಿದ್ದಾರೆ ನನಗೂ ವಯಸ್ಸು ಆಗಿದೆ ಸಮಾಜಕ್ಕೆ ಏನಾದರೂ ಒಳ್ಳೆಯ ಕೆಲಸ ಮಾಡೋಣ ಅಂತ ಬಂದಿದ್ದೇನೆ ಇದಕ್ಕೆ ಅಧಿಕಾರಿಗಳ ಸಹಕಾರವಿಲ್ಲವಾಗಿದೆ ನೀವು ಎಲ್ಲರೂ ಸಭೆಗಳಿಗೆ ಅಷ್ಟೇ ಸೀಮಿತವಾಗಿದ್ದೀರಾ ಯೋಜನೆಯನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಸಮಿತಿ ಸದಸ್ಯರು ಮಾತನಾಡಿ ಗ್ರಾಮ ಮಟ್ಟದಲ್ಲೇ ಫಲಾನುಭವಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಪಿಡಿಒ ಕಾರ್ಯದರ್ಶಿ, ಸಿಬ್ಬಂದಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಒಳಗೊಂಡಂತೆ ಸಭೆ ಮಾಡಲು ತೀರ್ಮಾನಿಸಲಾಯಿತು
ಜೊತೆಗೆ ತಾಲೂಕಿನ ಎಲ್ಲಾ ಆಹಾರ ಪಡಿತರ ಕೇಂದ್ರಗಳ ಮುಖ್ಯಸ್ಥರ ಸಭೆ ಮಾಡುವಂತೆ ಸೂಚನೆ ನೀಡಿದರು ಯಾಕೆ ಮಾಡಲಿಲ್ಲ ಸಮಿತಿ ಸದಸ್ಯರು ಸಮಸ್ಯೆಗಳನ್ನು ಹೇಳಿದರು ಪರಿಹಾರ ಮಾಡಿಲ್ಲ ಪದೇ ಪದೇ ಅದೇ ಸಮಸ್ಯೆಗಳನ್ನು ಎಷ್ಟು ಬಾರಿ ಹೇಳಬೇಕು ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸೌಲಭ್ಯ ತಲುಪಿಸಲು ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ ಎಂದರು.ಅಧ್ಯಕ್ಷ ಮುನಿಯಪ್ಪ ಮಾತನಾಡಿ ಸರ್ಕಾರದ ಜನಪರ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಮೃತ ಫಲಾನುಭವಿಗಳ ಹೆಸರಿನಲ್ಲಿ ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿದ್ದರೆ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು. ಇದರಿಂದ ಸಾರ್ವಜನಿಕ ಹಣದ ದುರ್ಬಳಕೆ ತಡೆಯಲು ಸಾಧ್ಯವಾಗುತ್ತದೆ ಜೊತೆಗೆ ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗಿದ್ದು ಕೂಡಲೇ ಸಮಿತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಗಮನ ಹರಿಸಿ ಅರ್ಹರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ತಾಪಂ ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸಮಿತಿ ಸದಸ್ಯರಾದ ಭರತ್, ನದಂಬಳ್ಳಿ ವಿಜಿಕುಮಾರ್, ಕವಿತಾ, ವಿನೋದ್, ಬಾಬು, ಶ್ರೀನಿವಾಸರೆಡ್ಡಿ, ಅಯೂಬ್, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು
































