Home ಜಿಲ್ಲೆ ಮುರಳಿಧರ ಎಕಲಾರಕರ್‍ಗೆ ರಾಷ್ಟ್ರೀಯ ಪ್ರಶಸ್ತಿ

ಮುರಳಿಧರ ಎಕಲಾರಕರ್‍ಗೆ ರಾಷ್ಟ್ರೀಯ ಪ್ರಶಸ್ತಿ

ಬೀದರ್: ಮೇ.8:ಇಲ್ಲಿಯ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರಿಗೆ ಬೆಂಗಳೂರಿನ ಸನಾತನ ಫೌಂಡೇಷನ್ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಲಭಿಸಿದೆ.
ಶಿಕ್ಷಣ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಸರ್.ಎಂ.ವಿ. ಆಡಿಟೋರಿಯಂನಲ್ಲಿ ಗುರುವಾರ ನಡೆದ ‘ಗಾಂಧಿ ಸ್ಮøತಿ: ನಮ್ಮ ನಡೆ ಗಾಂಧಿ ತತ್ವದೆಡೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಎಕಲಾರಕರ್ ಅವರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿದ್ದಾರೆ.
ಎಕಲಾರಕರ್ ಅವರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ದೊರೆತಿದ್ದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಶಂಕರ ರೆಡ್ಡಿ ಚಿಟ್ಟಾ, ಅಜಮತ್ ಪಟೇಲ್, ವಿದ್ಯಾಸಾಗರ್ ಸಿಂಧೆ, ಉಮೇಶ ಆಣದೂರ ಸೇರಿದಂತೆ ಅನೇಕರು ಸಂತಸ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.