ನನ್ನ ಹೇಳಿಕೆ ತಿರುಚಲಾಗಿದೆ

ಬೆಂಗಳೂರು.ಜು.೨:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವಿನ ಸಂಬಂಧ ಹಾಳು ಮಾಡುವ ಪ್ರಯತ್ನಗಳು ನಡೆದಿವೆ. ತಮ್ಮ ಹೇಳಿಕೆಗಳನ್ನು ತಿರುಚಿ ವರದಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.


ಕೆಆರ್ ಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ತಾವು ಮಾತನಾಡಿರುವ ಹೇಳಿಕೆ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ. ನಾನು ನನ್ನ ಆತ್ಮೀಯರ ಜತೆ ಮಾತನಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಕ್ಕಿ ಲಾಟರಿ ಇತ್ತು. ಸಿಎಂ ಆದರು ಎಂದು ಹೇಳಿದ್ದೆ ನಿಜ.

ಆದರೆ, ನಾನು ಸಿದ್ದರಾಮಯ್ಯ ಅವರಿಗೆ ನಾನು ಸೋನಿಯಾಗಾಂಧಿಯವರನ್ನು ಭೇಟಿ ಮಾಡಿಸಿದ್ದೇನೆ ಎಂಬುದು ಸಂಪೂರ್ಣ ಸುಳ್ಳು ಎಂದು ವೀಡಿಯೊ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದಾರೆ.


ಸಿದ್ದರಾಮಯ್ಯ ಅವರು ಒಬ್ಬ ಜನ ನಾಯಕ, ಅವರನ್ನು ಮುಖ್ಯಮಂತ್ರಿ ಮಾಡುವ ಶಕ್ತಿ ನನಗಿಲ್ಲ. ನಾನೂ ಸೇರಿದಂತೆ ೯ ಜನ ಜೆಡಿಎಸ್ ಶಾಸಕರು ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದೆವು. ಕಾಂಗ್ರೆಸ್ ಕೂಡ ಅವರ ಜನ ಬೆಂಬಲ ನೋಡಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಎಂದು ಸ್ಪಷ್ಟಪಡಿಸಿದರು.


ನನ್ನ ಮತ್ತು ಸಿದ್ದರಾಮಯ್ಯ ನಡುವೆ ಆತ್ಮೀಯ ಸಂಬಂಧವಿದೆ. ನನಗೆ ಅವರನ್ನು ಮುಖ್ಯಮಂತ್ರಿ ಮಾಡುವಷ್ಟು ಶಕ್ತಿ ಇಲ್ಲ, ನನ್ನ ಸಿದ್ದರಾಮಯ್ಯ ಅವರ ಸಂಬಂಧ ಹಾಳು ಮಾಡಲು ಉದ್ದೇಶಪೂರಕವಾಗಿ ಕೆಲವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.