
ಹುಮನಾಬಾದ್,ಜ.31: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಮಕ್ಕಳು ಸೇರಿ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದೆ.ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಹುಮನಾಬಾದ್ ಪೆÇಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಸೋಕೋ ತಂಡವೂ ಆಗಮಿಸಿ ಸ್ಫೋಟದ ವಸ್ತುಗಳ ಮಾದರಿ ಸಂಗ್ರಹಿಸಲಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿದ್ದಾರೆ
ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ:
ನಿಗೂಢ ಸ್ಫೋಟದಿಂದ ಮಕ್ಕಳಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು, ಘಟನೆಯ ತನಿಖೆಗೆ ಆದೇಶ ನೀಡಿದ್ದಾರೆ.
ಈ ಬಗ್ಗೆ ಎಕ್ಸ್‍ನಲ್ಲಿ ಪೆÇೀಸ್ಟ್ ಮಾಡಿರುವ ಅವರು, ಘಟನೆಯು ನನಗೆ ಅತ್ಯಂತ ಆಘಾತ ಉಂಟು ಮಾಡಿದೆ ಎಂದಿದ್ದಾರೆ. ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವಂತೆ ಸೂಚನೆ ನೀಡಿದ್ದೇನೆ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಫೋಟಕ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ, ಸ್ಫೋಟ ಸ್ಥಳದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ, ಸ್ಫೋಟಕ್ಕೆ ಕಾರಣವೇನು? ಬಳಸಿದ ವಸ್ತು ಯಾವುದು? ಅದು ಅಲ್ಲಿ ಹೇಗೆ ಬಂದಿತು? ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು? ಎಂಬ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾರಣರಾದವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.
























