ಎನ್. ಎಚ್. ಎಂ. ಗುತ್ತಿಗೆ ಸಿಎಚ್‍ಓಗಳ ಧರಣಿ

ಯಾದಗಿರಿ: ಜ.30:ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇತನ-ಭತ್ಯೆಗಳ ಪಾವತಿಸಲು ನಿರಂತರ ವಿಳಂಬ ಮಾಡುತ್ತಿರುವ ಕ್ರಮ ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ (ಎನ್‍ಎಚ್‍ಎಂ) ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರಿಗೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ ಪ್ರತಿಭಟಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಂಘದ ರಾಜ್ಯ ಗೌರವಾಧ್ಯಕ್ಷ ಆರ್. ಮಾನ್ಸಯ್ಯ ಮಾತನಾಡಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ವೇತನ, ಪೆÇ್ರೀತ್ಸಾಹಧನ ಹಾಗೂ ವಿವಿಧ ಭತ್ಯೆಗಳ ಪಾವತಿಯಲ್ಲಿ ನಡೆಯುತ್ತಿರುವ ನಿರಂತರ ವಿಳಂಬ ಮತ್ತು ಬಾಕಿ ಹಣ ಪಾವತಿಯಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಿ ಕಿರುಕುಳ ನೀಡುತ್ತಿರುವುದು ಖಂಡನೀಯ ಅಧಿಕಾರಿಗಳ ಅಂಧಾ ದರ್ಬಾರ್ ನಡೆಸಿದರೆ ಉಗ್ರ ಪ್ರತಿಭಟನೆಯ ಮೂಲಕ ಉತ್ತರ ನೀಡಲಾಗುವುದು ಎಂದು ಗುಡುಗಿದರು.

ಕೂಡಲೇ ಮೇಲಧಿಕಾರಿಗಳು ಎಚ್ಚೆತ್ತುಕೊಂಡು ಫೆ.15 ರೊಳಗಾಗಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ರೂಪಕ್ಕೆ ಪ್ರತಿಭಟನೆ ಕೊಂಡೊಯ್ಯಲಾಗುವುದು ಎಂದು ಎಚ್ಚರಿಸಿದರು.

ಸಂಘದ ರಾಜ್ಯಾಧ್ಯಕ್ಷ ಮಮಿತ್ ಗಾಯಕವಾಡ ಮಾತನಾಡಿ ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಕೆಳ ಹಂತದ ಉದ್ಯೋಗಿಗಳಿಗೆ ಅಧಿಕಾರಿಗಳ ಕಿರುಕುಳ ಹೆಚ್ಚಿರುವುದು ನಾಚಿಕೆಗೇಡು ಸಂಗತಿಯಾಗಿದ್ದು, ನೌಕರರು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕಾರಣ ಕಿರುಕುಳ ನೀಡುತ್ತಿರುವುದು ಬಹಿರಂಗವಾಗಿದೆ. ಇದನ್ನು ಅಧಿಕಾರಿಗಳು ಕೈಬಿಡಬೇಕು ಇಲ್ಲವಾದಲ್ಲಿ ಸರಿಯಾದ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಿರಣ, ರಾಜ್ಯ ಉಪಾಧ್ಯಕ್ಷ ಬಸವಾನಂದ, ಜಿಲ್ಲಾಧ್ಯಕ್ಷ ಕ್ರಿಸ್ಟೊಫರ್, ಪ್ರಧಾನ ಕಾರ್ಯದರ್ಶಿ ದುಂಡಪ್ಪ ಚವ್ಹಣ, ಕಾರ್ಯದರ್ಶಿ ಸಂದೀಪ ಕುಮಾರ, ಮೌನೇಶ್ವರ, ಇಮ್ಯಾನುವೆಲ್, ಆನಂದ ಸ್ವಾಮಿ, ದಯಾನಂದ, ಚಂದ್ರಕಾಂತ, ಮಹಾಂತೇಶ, ಹಾಜರಾ ಫಿರ್ದೋಸ್, ಸುನಿತಾ, ಎಂಜಲಿನಾ ಸೇರಿದಂತೆ ಇನ್ನಿತರರು ಇದ್ದರು.