
ಬೆಂಗಳೂರು: ಸಾಮಾಜಿಕ, ಕೃಷಿ, ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಬೀದರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವಿಜಯಕುಮಾರ ಎಸ್. ಪಾಟೀಲ ಗಾದಗಿ ಅವರಿಗೆ ಪ್ರತಿಷ್ಠಿತ ‘ನಾಡಪ್ರಭು ಶ್ರೀ ಕೆಂಪೇಗೌಡ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾಜಮುಖಿ ಕಾರ್ಯಗಳು, ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಶಿಕ್ಷಣ ಕ್ಷೇತ್ರದ ಸೇವೆ ಹಾಗೂ ಉದ್ಯಮದ ಮೂಲಕ ಉದ್ಯೋಗ ಸೃಷ್ಟಿ ಮತ್ತು ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ವಿಜಯಕುಮಾರ ಎಸ್. ಪಾಟೀಲ ಗಾದಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದರು.
ಪ್ರಶಸ್ತಿ ಸ್ವೀಕರಿಸಿದ ವಿಜಯಕುಮಾರ ಪಾಟೀಲ ಅವರು, ಈ ಗೌರವವು ಸಮಾಜದ ಪರವಾಗಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ನೀಡಿದೆ. ಮುಂದಿನ ದಿನಗಳಲ್ಲಿಯೂ ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಜನಪರ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದರು























