Home ಜಿಲ್ಲೆ ಕಲಬುರಗಿ ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳಲ್ಲಿ 371 ಜೆ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅನ್ಯಾಯ ಸರಿಪಡಿಸಲು ನಮೋಶಿ...

ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳಲ್ಲಿ 371 ಜೆ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅನ್ಯಾಯ ಸರಿಪಡಿಸಲು ನಮೋಶಿ ಮನವಿ

ಕಲಬುರ್ಗಿ; ಫೆ.25: ಕಲಬುರಗಿ ನಗರದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರ ಗ್ರೇಡ್-01 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 13-12-2022 ರಂದು ಮಿಕ್ಕುಳಿದ ವೃಂದದ 265 ಹಾಗೂ ಸ್ಥಳೀಯ ವೃಂದದ 45 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ.

ಆದರೆ ಅಂತಿಮ ಆಯ್ಕೆಪಟ್ಟಿ ಸಿದ್ಧಪಡಿಸುವ ಸಂದರ್ಭದಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಕಡ್ಡಾಯವಾಗಿ ಅನುಸರಿಸಬೇಕಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆ ದಿನಾಂಕ 03-06-2025 ರ ಸೂಚನೆಗಳನ್ನು ಉಲ್ಲಂಘಿಸಿ ಆಯ್ಕೆಪಟ್ಟಿ ತಯಾರಿಸಲಾಗಿರುತ್ತದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಸಂವಿಧಾನದ 371(ಜೆ) ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಆದ್ದರಿಂದ, ತಕ್ಷಣವೇ ಪ್ರಸ್ತುತ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ, 03-06-2025ರ ಸುತ್ತೋಲೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನ್ಯಾಯಸಮ್ಮತವಾಗಿ ಹೊಸ ಆಯ್ಕೆಪಟ್ಟಿಯನ್ನು ಪ್ರಕಟಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.