Home ಸಿನೆಮಾ ಬಾಲಿವುಡ್ ವಸರ್ಕೆ ಚುನರ ತೇರಿ ಹಾಡಿನ ಅಶ್ಲೀಲತೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿ

ವಸರ್ಕೆ ಚುನರ ತೇರಿ ಹಾಡಿನ ಅಶ್ಲೀಲತೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿ

ನವದೆಹಲಿ.ಮಾ೧೯: ಕೆಡಿ ಚಿತ್ರದ ವಸರ್ಕೆ ಚುನರ ತೇರಿ ಹಾಡಿನ ಅಶ್ಲೀಲತೆ ಹಿನ್ನಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.


ಈ ಸಂಬಂಧ ಕೆಡಿ ಚಿತ್ರದ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ರಾಷ್ಟ್ರೀಯ ಮಹಿಳಾ ಆಯೋಗವು ನೋಟಿಸ್ ಜಾರಿಗೊಳಿಸಿದೆ. ನೋಟಿಸ್ ನಲ್ಲಿ ಮಾರ್ಚ್.೨೪ರ ಮಧ್ಯಾಹ್ನ ೧೨.೩೦ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.


ಕೆಡಿ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕ ವೆಂಕಟ್ ನಾರಾಯಣ್, ನಟಿ ನೋರಾ ಫತೇಹಿ, ನಟ ಸಂಜಯ್ ದತ್, ರಕೀಬ್ ಗೆ ರಾಷ್ಟ್ರೀಯ ಮಹಿಳಾ ಆಯೋಗವು ನೋಟಿಸ್ ಜಾರಿಗೊಳಿಸಲಾಗಿದೆ. ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ ಆಯೋಗವು ನೋಟಿಸ್ ಜಾರಿಗೊಳಿಸಿದೆ.


೧೯೯೦ರ ಎನ್ ಸಿ ಡಬ್ಲ್ಯೂ ಕಾಯ್ದೆಯ ಅಡಿ ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಲಾಗಿದೆ. ಕೆಡಿ ಚಿತ್ರದಲ್ಲಿ ಪ್ರಾಥಮಿಕ ಲೈಂಗಿಕವಾಗಿ ಸೂಚಿಸುವ, ಆಕ್ಷೇಪಾರ್ಹ ಮತ್ತು ಭಾರತೀಯ ನ್ಯಾಯ ಸಂಹಿತಾ, ಐಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿರುವ ನಿಬಂಧನೆಗಳನ್ನು ಕೆಡಿ ಸಿನಿಮಾ ತಂಡ ಉಲ್ಲಂಘಿಸಿದೆ ಎಂಬುದಾಗಿ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.


ಮಾರ್ಚ್.೨೪ರಂದು ಸಂಬಂಧಿತ ದಾಖಲಾತಿಯೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ವಿಚಾರಣೆಗೆ ಹಾಜರಾಗದಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.