
ವಿಜಯಪುರ, ನ. 2:ರಾಷ್ಟ್ರಧ್ವಜ ತಲೆ ಕೆಳಗಾಗಿ ಹಾರಿಸಿದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ತಾಲೂಕು ಆಡಳಿತ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಲೆ ಕೆಳಗಾಗಿ ರಾಷ್ಟ್ರಧ್ವಜಾರೋಹಣ ಮಾಡಲಾಗಿದ್ದು, ಅತಿಥಿಗಳು ಕೂಡ ತಲೆ ಕೆಳಗಾದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದ್ದಾರೆ.
ಆಗ ಕೆಲವರಿಗೆ ರಾಷ್ಟ್ರಧ್ವಜ ತಲೆ ಕೆಳಗಾಗಿ ಹಾರಿಸಿರುವುದು ಅರಿವಿಗೆ ಬಂದಿದ್ದು, ಬಳಿಕ ತತ್ ಕ್ಷಣ ಧ್ವಜವನ್ನು ಕೆಳಕ್ಕಿಳಿಸಲಾಗಿದೆ. ಈ ವೇಳೆ ರಾಷ್ಟ್ರಗೀತೆ ಮೊಳಗಿದೆ. ಆಗ ಸರಿಪಡಿಸಿ ಮತ್ತೆ ಧ್ವಜಾರೋಹಣ ಮಾಡಲಾಗಿದೆ.
ಈ ಅಚಾತುರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.























