ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ

ಕಲಬುರಗಿ:ಆ.15: ನಗರದ ಪೆÇಲೀಸ್ ಪರೇಡ್ ಮೈದಾನದಲ್ಲಿ 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 8 ನೆಯ ಪೀಠಾಧಿಪತಿ ಪೂಜ್ಯ ಡಾ ಶರಣಬಸವಪ್ಪ ಅಪ್ಪಾ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಗೌರವ ಸೂಚಕವಾಗಿ ಮೌನಾಚರಣೆ ಮಾಡಲಾಯಿತು.
ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತೀಮಾ, ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಬಾಬುರಾವ ಚಿಂಚಮಸೂರು, ಕುಡಾ ಅಧ್ಯಕ್ಷ ಮಜರ್ ಅಹಮದ್ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮೀಷನರ್ ಡಾ ಶರಣಪ್ಪ ಢಗೆ, ಎಸ್‍ಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.