
ಕಲಬುರಗಿ,ಡಿ.10-ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಜನಜಾಗೃತಿ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕಲಬುರಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಎ.ವಿ.ಶ್ರೀನಾಥ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ನಗರ ಪೆÇಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಎಸ್. ಪಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭoವರ್ ಸಿಂಗ್ ಮೀನಾ,ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ವಿ. ಪಸಾರ, ಕಲಬುರಗಿ ವಿಜ್ಞಾನೇಶ್ವರ ಸರಕಾರಿ ಕಾನೂನು ಮಹಾವಿದ್ಯಾಲಯ ಕಾನೂನು ಸಹಾಯಕ ಪ್ರಾಧ್ಯಾಪಕರಾದ ವಾಣಿ ಮರಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

























