
ಗದಗ,ಜೂ.೨೪: ಗದಗ ಜಿಲ್ಲೆಯಲ್ಲಿ ಜುಲೈ ೧೧ ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ತಿಳಿಸಿದರು.
ನಗರದ ಜಿಲ್ಲಾ ಸತ್ರ ನ್ಯಾಯಾಲಯದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಮತ್ತು ವ್ಯಾಜ್ಯಕಾರರು ತಮ್ಮ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ನ್ಯಾಯಾಲಯದ ಹೊರಗಿನ (ಪ್ರೀ-ಲಿಟಿಗೇಷನ್) ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಅವರು ತಿಳಿಸಿದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನAತೆ ಒಟ್ಟು ೧೫ ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು ೨೧೦೧೧ ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೨೮೩೫ ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ ಎಂದರು.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬAಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿAದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬAಧಪಟ್ಟ ವಕೀಲರು. ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ ೧೧ ರಂದು ಜರಗುವ ರಾಷ್ಟಿçÃಯ ಲೋಕ ಅದಾಲತ್ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಹೇಳಿದರು.
ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಮೂಲಕ ಕರೆ ನೀಡಿದರು.
ಕಳೆದ ಮಾರ್ಚ-೨೦೨೬ ರಂದು ಜರುಗಿದ ಲೋಕ ಅದಾಲತ್ ನಲ್ಲಿ ೩೩೮೩ ಚಾಲ್ತಿ ಪ್ರಕರಣಗಳನ್ನು ಹಾಗೂ ೬೨೨೯೯ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು ೬೫೬೮೨ ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ ೦೩ ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು.
ಕಳೆದ ಮಾರ್ಚ್ ೨೬ ರಂದು ನಡೆದ ಲೋಕ ಅದಾಲತ್‌ನಲ್ಲಿ ಜಿಲ್ಲೆಯಾದ್ಯಂತ ದಾಖಲೆ ಮಟ್ಟದಲ್ಲಿ ಪ್ರಕರಣಗಳು ಇತ್ಯರ್ಥವಾಗಿದ್ದವು. ಈ ಬಾರಿಯೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಕಳೆದ ಅದಾಲತ್‌ನಲ್ಲಿ ವಿಶೇಷವಾಗಿ ೩ ಪ್ರಮುಖ ವಿಭಜನಾ ಪ್ರಕರಣಗಳನ್ನು (Pಚಿಡಿಣiಣioಟಿ suiಣs) ಕೇವಲ ರಾಜಿ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಪಡಿಸಿ, ದಶಕಗಳ ಕೌಟುಂಬಿಕ ಕಲಹಕ್ಕೆ ಮುಕ್ತಿ ಹಾಡಲಾಗಿತ್ತು. ಈ ಬಾರಿಯೂ ಅಂತಹ ಜಮೀನು ಮತ್ತು ಆಸ್ತಿ ಹಂಚಿಕೆ ವಿವಾದಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.


























