ರಾಷ್ಟ್ರಕವಿ ಕುವೆಂಪು ಜನ್ಮದಿನ ಆಚರಣೆ

ಧಾರವಾಡ, ಡಿ.30: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪುμÁ್ಪರ್ಚಣೆ ಮಾಡಿ, ಚಾಲನೆ ನೀಡಿದರು.


ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, ಕುವೆಂಪು ಅವರ ದೃಷ್ಟಿಯಲ್ಲಿ ಮಗು ಹುಟ್ಟಿದಾಗ ಯಾವುದೇ ಜಾತಿ ಅಥವಾ ಧರ್ಮದ ಹಣೆಪಟ್ಟಿ ಹೊತ್ತು ಬರುವುದಿಲ್ಲ. ಅದು ಕೇವಲ ಒಂದು ಜೀವಿಯಾಗಿ, ವಿಶ್ವಮಾನವನಾಗಿ ಭೂಮಿಗೆ ಬರುತ್ತದೆ. ಆದರೆ ಸಮಾಜವು ಮಗುವಿಗೆ ಭಾμÉ, ಧರ್ಮ ಮತ್ತು ಪಂಗಡಗಳ ಬೇಲಿಯನ್ನು ಹಾಕುತ್ತದೆ ಎಂದರು.


ನಾವು ಮಗುವನ್ನು ಮತ್ತೆ ವಿಶ್ವಮಾನವನನ್ನಾಗಿ ಮಾಡುವ ಶಿಕ್ಷಣ ನೀಡಬೇಕಿದೆ. ಕುವೆಂಪು ಅವರ ಓ ನನ್ನ ಚೇತನ, ಆಗು ನೀ ಅನಿಕೇತನ ಎಂಬ ಸಾಲುಗಳು ನಮ್ಮ ಮನಸ್ಸಿನ ಎಲ್ಲ ಸಂಕುಚಿತ ಭಾವನೆಗಳನ್ನು ತೊಡೆದುಹಾಕಿ, ವಿಶಾಲ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆಯಾಗಿವೆ ಎಂದು ಹೇಳಿದರು.


ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಟ್ರಸ್ಟ್ ಅಧ್ಯಕ್ಷ ರಂಜಾನ್ ದರ್ಗಾ ಅವರು ಮಾತನಾಡಿ, ಇಂದಿನ ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಅನಾಚಾರಗಳು ಆತಂಕಕಾರಿಯಾಗಿವೆ. ಕುವೆಂಪು ಅವರು ಅಂದೇ ಜಲಗಾರ ಮತ್ತು ಶೂದ್ರ ತಪಸ್ವಿ ಕೃತಿಗಳ ಮೂಲಕ ಜಾತಿ ವ್ಯವಸ್ಥೆಯ ಅಟ್ಟಹಾಸವನ್ನು ಪ್ರಶ್ನಿಸಿದ್ದರು ಮತ್ತು ನಾವು ಕುವೆಂಪು ಅವರ ವಿಚಾರಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.


ಡಾ. ಹೇಮಾ ಪಟ್ಟಣಶೆಟ್ಟಿ ಅವರು ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ದಿನಾಚರಣೆಯ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.


ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಕಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಬಿ.ಮಾರುತಿ, ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ಡಾ. ವೀರಣ್ಣ ರಾಜೂರ, ಸದಸ್ಯರಾದ ಡಾ. ಅಶೋಕ ಶಟ್ಟರ, ಕನ್ನಡ ಸಾಹಿತ್ಯ ಪರಿಷತ್ತ ಧಾರವಾಡ ತಾಲೂಕು ಅಧ್ಯಕ್ಷ ಮಹಾಂತೇಶ ನರೆಗಲ್ಲ ಸೇರಿದಂತೆ ವಿವಿಧ ರಾಷ್ಟ್ರೀಯ ಟ್ರಸ್ಟ್‍ಗಳ ಸದಸ್ಯರು, ಸಾಹಿತ್ಯ ಪರಿಷತ್ತ ಸದಸ್ಯರು, ಕುವೆಂಪು ಅವರ ಅಭಿಮಾನಿಗಳು ಭಾಗವಹಿಸಿದ್ದರು.