
ಧಾರವಾಡ, ಆ೩೦: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಂಗಸAಸ್ಥೆಯಾದ ರಾಜೀವ್ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ಕ್ರೀಡಾ ದಿನವನ್ನು ಅತ್ಯಂತ ಆಚರಿಸಲಾಯಿತು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವ, ದೈಹಿಕ ಆರೋಗ್ಯ, ಶಿಸ್ತು, ಸಮಯಪಾಲನೆ, ತಂಡಭಾವನೆ ಹಾಗೂ ಕ್ರೀಡಾಸ್ಫೂರ್ತಿಯ ಕುರಿತು ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲರು, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಮತ್ತು ತಂಡಭಾವನೆ ಬೆಳೆಯುತ್ತದೆ” ಎಂದು ಹೇಳಿದರು. ವಿದ್ಯಾರ್ಥಿಗಳು ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಪ್ತಾಪುರ್ ಕ್ಲಸ್ಟರ್ ಸಿ ಆರ್ ಪಿ ಆದ ಶ್ರೀಮತಿ ಶೋಭಾ ಕುಸುಗಲ್ ಪಾಲ್ಗೊಂಡಿದ್ದರು.






























