Home ಜಿಲ್ಲೆ ಕಲಬುರಗಿ ಸಿಯುಕೆ ಎಂಬಿಎ ವಿದ್ಯಾರ್ಥಿಗಳ ರಾಷ್ಟ್ರೀಯ ಅಧ್ಯಯನ ಪ್ರವಾಸ

ಸಿಯುಕೆ ಎಂಬಿಎ ವಿದ್ಯಾರ್ಥಿಗಳ ರಾಷ್ಟ್ರೀಯ ಅಧ್ಯಯನ ಪ್ರವಾಸ

ಕಲಬುರಗಿ,ಅ.17: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ವತಿಯಿಂದ ದ್ವಿತೀಯ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 12ರಿಂದ 26 ರವರೆಗೆ ರಾಷ್ಟ್ರೀಯ ಅಧ್ಯಯನ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದ ಅಂಗವಾಗಿ ವಿದ್ಯಾರ್ಥಿಗಳು ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಕ್ಷೇತ್ರ ಅಧ್ಯಯನ ನಡೆಸುತ್ತಿದ್ದಾರೆ.
ದೇಶದ ಐತಿಹಾಸಿಕ ಸ್ಮಾರಕಗಳು, ಸಾಂಸ್ಕøತಿಕ ಪರಂಪರೆಯ ತಾಣಗಳು, ಧಾರ್ಮಿಕ ಸ್ಥಳಗಳು, ನೈಸರ್ಗಿಕ ಆಕರ್ಷಣೆಗಳು ಹಾಗೂ ಪ್ರವಾಸೋದ್ಯಮ ಮೂಲಸೌಕರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಒದಗಿಸುವುದು ಈ ಅಧ್ಯಯನ ಪ್ರವಾಸದ ಮುಖ್ಯ ಉದ್ದೇಶವಾಗಿದೆ. ತರಗತಿಯಲ್ಲಿ ಕಲಿತ ಅಧ್ಯಯನ ವಿಷಯಗಳನ್ನು ಕ್ಷೇತ್ರ ಅನುಭವದೊಂದಿಗೆ ಸಂಯೋಜಿಸುವ ಮೂಲಕ ಪ್ರವಾಸಿ ತಾಣಗಳ ನಿರ್ವಹಣೆ, ಆತಿಥ್ಯ ಸೇವೆಗಳು, ಪರಂಪರೆಯ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಕಾರ್ಯವೈಖರಿಯನ್ನು ನೇರವಾಗಿ ಅರಿತುಕೊಳ್ಳಲು ಈ ಪ್ರವಾಸ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಿದೆ.
ವಿ.ವಿ.ಯ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರು ಹಾಗೂ ಪ್ರವಾಸದ ಸಂಯೋಜಕರಾದ ಡಾ. ನವೀನ್ ಕುಮಾರ್ ಟಿ.ಜಿ. ಮತ್ತು ಡಾ. ನಟರಾಜ್ ಬಿ. ಪಟ್ಟೇದ್ ಅವರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದು, ಪ್ರವಾಸದ ಉದ್ದಕ್ಕೂ ಮಾರ್ಗದರ್ಶನ ನೀಡುತ್ತಿದ್ದಾರೆ.
ಅಕ್ಟೋಬರ್ 12 ರಂದು ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಹಾಗೂ ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಅವರು ವಿಭಾಗಗಳ ಮುಖ್ಯಸ್ಥರು, ಡೀನ್‍ಗಳು ಮತ್ತು ಬೋಧಕ ಸಿಬ್ಬಂದಿ ರಾಷ್ಟ್ರೀಯ ಅಧ್ಯಯನ ಪ್ರವಾಸ ಕೈಗೊಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.