
ಸಂಜೆವಾಣಿ ವಾರ್ತೆ,
ವಿಜಯಪುರ, ಜ. ೨೯: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಎನ್.ಎಸ್.ಎಸ್. ಘಟಕಗಳ ವತಿಯಿಂದ ವಿವಿಯ ಸಿಂಡಿಕೇಟ್ ಸಭಾಭವನದಲ್ಲಿ ಇತ್ತೀಚಿಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಷಾ ನಿಕಾಯದ ಡೀನ್ ಪ್ರೊ. ನಾಮದೇವ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ, ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್‌ನ ವಿವಿಧ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ ರಾಠೋಡ, ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ಎಲ್ಲಾ ಎನ್.ಎಸ್.ಎಸ್. ಘಟಕಗಳ ಸ್ವಯಂ ಸೇವಕಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಇತರ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
























