Home ಮುಖಪುಟ ಸುದ್ದಿ ಪೊಲೀಸ್ ಆಯುಕ್ತರ ತೀರ್ಮಾನ ಆಧರಿಸಿ ಹೋರಾಟ ಸ್ವರೂಪ ನಿರ್ಧಾರ

ಪೊಲೀಸ್ ಆಯುಕ್ತರ ತೀರ್ಮಾನ ಆಧರಿಸಿ ಹೋರಾಟ ಸ್ವರೂಪ ನಿರ್ಧಾರ

ಬೆಂಗಳೂರು, ಅ. ೧೬- ಸ್ಟಿಂಗ್ ಕಾರ್ಯಾಚರಣೆ ಕುರಿತ ತನಿಖೆಗೆ ಸಂಬಂಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ೨ ದಿನ ಕಾಲಾವಕಾಶ ಕೋರಿದ್ದಾರೆ. ಅವರು ಯಾವ ತೀರ್ಮಾನ ಮಾಡುತ್ತಾರೋ ಅದರ ಮೇಲೆ ಮುಂದಿನ ಹೋರಾಟದ ಸ್ವರೂಪವನ್ನು ನಿರ್ಧಾರ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.


ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಾನೇ ಹೋಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದೇನೆ. ನನ್ನನ್ನು ತನಿಖೆ ಮಾಡಿ ಎಂದು ಹೇಳಿದ್ದೇನೆ. ಆಯುಕ್ತರು ಯಾವ ನಿರ್ಧಾರ ಮಾಡುತ್ತಾರೋ ನೋಡೋಣ. ಆಮೇಲೆ ಹೋರಾಟದ ಸ್ವರೂಪವನ್ನು ನಿರ್ಧರಿಸುತ್ತೇವೆ ಎಂದರು.


ಜೆಡಿಎಸ್ ಜಾಲತಾಣದಲ್ಲಿ ಕೆಲಸ ಮಾಡುವ ಹುಡುಗರನ್ನು ಕರೆದುಕೊಂಡು ಹೋಗಿ ಘಟನೆಯನ್ನು ಬೇರೆಡೆ ತಿರುಗಿಸಲು ಪ್ರಯತ್ನ ನಡೆಸಿದ್ದಾರೆ. ಇದನ್ನು ನೋಡಿಯೋ ನಾನು ರೇವಣ್ಣ ಅಲ್ಲ ಎಂದು ಹೇಳಿರುವುದು ಎಂದರು.


ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಟಿಂಗ್ ವಿಡಿಯೋಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ. ಅಲ್ಲಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರ ಕ್ಷಮೆ ಕೇಳಿದರೋ ಏನೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.