Home ಜಿಲ್ಲೆ ಕಲಬುರಗಿ ಬೆಳಕು ಆಧಾರಿತ ತಂತ್ರಜ್ಞಾನದ ಸದುಪಯೋಗ ಅಗತ್ಯ

ಬೆಳಕು ಆಧಾರಿತ ತಂತ್ರಜ್ಞಾನದ ಸದುಪಯೋಗ ಅಗತ್ಯ

ಕಲಬುರಗಿ:ಮೇ.16:ನಮ್ಮ ಜೀವನದ ವಿವಿಧ ಅಂಶಗಳಲ್ಲಿ ಬೆಳಕು ಮತ್ತು ಬೆಳಕು ಆಧಾರಿತ ತಂತ್ರಜ್ಞಾನಗಳು ಅಗತ್ಯವಾಗಿವೆ ವಿಜ್ಞಾನ, ತಂತ್ರಜ್ಞಾನ, ಸಂಸ್ಕøತಿ, ಕಲೆ, ಶಿಕ್ಷಣ ಮತ್ತು ಸುಸ್ಥಿರ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಬೆಳಕಿನಿಂದ ಸಾಧ್ಯವಾದ ಸಾಧನೆಗಳು ಅಪಾರವಾಗಿದ್ದು, ಅಭಿವೃದ್ಧಿಗೆ ಪೂರಕವಾಗಿವೆ. ಅವುಗಳ ಸದುಪಯೋಗ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಸಂತೋಷ ಕಾಲನಿ ಕ್ರಾಸ್ ಸಮೀಪದ ‘ರಿಪಬ್ಲಿಕ್ ಸ್ಪೋಕನ್ ಇಂಗ್ಲೀμï ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಬೆಳಕು ದಿನಾಚರಣೆ”ಯಲ್ಲಿ ಅವರು ಮಾತನಾಡುತ್ತಿದ್ದರು.
ಇಂದು ಬೆಳಕು ಆಧಾರಿತ ನಾವೀನ್ಯತೆಗಳನ್ನು ಬಳಸಿಕೊಂಡು ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ಅಂತಾರಾಷ್ಟ್ರೀಯ ಸಹಕಾರ ಮತ್ತು ಸಹಯೋಗವನ್ನು ಉತ್ತೇಜಿಸುತ್ತದೆ. ಇದು ಜಗತ್ತಿನಲ್ಲಿ ಸಕಾರಾತ್ಮಕ ಬದಲಾವಣೆ ಮತ್ತು ಪ್ರಗತಿಯನ್ನು ಹೆಚ್ಚಿಸಲು ಬೆಳಕಿನ ಅಪಾರವಾದ ಸಾಮಥ್ರ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಸ್ಲಾಂ ಶೇಖ್, ಕರಾವಿಪ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್. ಬಿರಾದಾರ, ಓಂಕಾರ ವಠಾರ, ದತ್ತು ಹಡಪದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.