
ಕಲಬುರಗಿ,ಫೆ.23-ಬಾಗಲೋಟೆಯ ನನಾಮ ಫೌಂಡೇಶನ್ ಮತ್ತು ಕಲಬುರಗಿಯ ಹೊಟ್ಟಿ ಫೌಂಡೇಶನ್ ವತಿಯಿಂದ ಬಾಗಲಕೋಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫೆ.21 ಮತ್ತು 22 ರಂದು ಆಯೋಜಿಸಿದ್ದ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನದಲ್ಲಿ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಲಲಿತಕಲೆ ವಿಭಾಗದ ಪ್ರಾಧ್ಯಾಪಕರು ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಡಾ.ಸುಬ್ಬಯ್ಯ ಎಂ.ನೀಲಾ ಅವರು ಭಾಗವಹಿಸಿದ್ದರು.
ಮಾಜಿ ಶಾಸಕ ಡಾ.ವೀರಣ್ಣ ಸಿ. ಚರಂತಿಮಠ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದರು. ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅಂತರಾಷ್ಟ್ರೀಯ ಕಲಾವಿದ ಡಾ.ಬಸವರಾಜ ಗವಿಮಠ, ಸಮಾಜ ಸೇವಕ ಸುರೇಶ್ ಅಯ್ಯಪ್ಪ ವಸ್ತ್ರದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ಹೊಟ್ಟಿ ಫೌಂಡೇಶನ್ ಅಧ್ಯಕ್ಷ ರೇವಣಸಿದ್ದಪ್ಪ ಹೊಟ್ಟಿ ಅತಿಥಿಗಳಾಗಿ ಆಗಮಿಸಿದ್ದರು. ನಮನ್ ಫೌಂಡೇಶನ್ ಅಧ್ಯಕ್ಷ ಅನಗವಾಡಿ ನಬಿ ನದಾಫ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 90 ಕಲಾವಿದರು ಭಾಗವಹಿಸಿದ್ದರು.
























