
ಯಾದಗಿರಿ:ಮಾ.೩೦: ಯಾದಗಿರಿ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರ ಬಿಳ್ಹಾರ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಯ್ಯ ಮುತ್ಯಾ ಹಾಗೂ ಶ್ರೀ ಹೊನ್ನಣ್ಣ ಮುತ್ಯಾ ಅವರ ನೂತನ ದೇವಾಲಯದ ಲೋಕಾರ್ಪಣೆ ಸಮಾರಂಭವು ಭಕ್ತಿಭಾವದ ವಾತಾವರಣದಲ್ಲಿ ನೆರವೇರಿತು.
ಈ ಮಹತ್ವದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಮಹೇಶರಡ್ಡಿ ಮುದ್ನಾಳ ಅವರು ಭಾಗಿಯಾಗಿ ದೇವರ ದರ್ಶನ ಪಡೆದು, ಸಮಾರಂಭಕ್ಕೆ ಶುಭಾಶಯಗಳನ್ನು ತಿಳಿಸಿದರು. ಗ್ರಾಮದಲ್ಲಿ ಹಬ್ಬದ ಸಂಭ್ರಮ ಕಳೆಗುಂದದAತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜಾ ಕಾರ್ಯಕ್ರಮಗಳಲ್ಲಿ ತೊಡಗಿದರು.
ದೇವಾಲಯ ಲೋಕಾರ್ಪಣೆಯ ಅಂಗವಾಗಿ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ಭಕ್ತಿಭಾವದಿಂದ ಭಾಗವಹಿಸಿ ಆಶೀರ್ವಾದ ಪಡೆದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಸಿದ್ದಣಗೌಡ ವಡಗೇರಾ, ಮರೆಪ್ಪ ಬಿಳ್ಹಾರ, ವಿರುಪಾಕ್ಷಪ್ಪಗೌಡ ಮಾಚನೂರ ಸೇರಿದಂತೆ ಹಲವರು ಉಪಸ್ಥಿತರಿದ್ದು, ಸಮಾರಂಭಕ್ಕೆ ಮತ್ತಷ್ಟು ಮೆರುಗು ತಂದರು.






















