
ಕಮಲಾಪೂರ:ಜ.೨೨:ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು ಎಂದು ಡೊಂಗರಗಾAವ ಗ್ರಾಮ ಪಂಚಾಯತ ಅಧ್ಯಕ್ಷ ಅನೀಲಕುಮಾರ ಬೆಳಕೇರಿ ಅಭಿಪ್ರಾಯಪಟ್ಟರು.
ಡೊಂಗರಗಾAವ ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಅಂಬಿಗರ ಚೌಡಯ್ಯ ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ.
ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳ ತನ್ನ ಅನುಭಾವ ದೃಷ್ಟಿಯನ್ನು ಪ್ರಕಟಿಸಿದವರು.ಅವರ ವಚನಗಳಲ್ಲಿ ಕಂಡುಬರುವ ಸಮಕಾಲೀನ ಸಮಾಜ ವಿಡಂಬನೆಯ ವ್ಯಗ್ರದೃಷ್ಟಿ ಬೇರೆಯವರಲ್ಲಿ ವಿರಳವೆಂದೇ ಹೇಳಬೇಕು ಎಂದು ಹೇಳಿದ ಅವರು ಅವರ ವಚನ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು,ಗ್ರಾಮ ಪಂಚಾಯತ ಸದಸ್ಯರುಗಳು, ಹಾಗೂ ಕೋಲಿ ಸಮಾಜದ ಮುಖಂಡರು ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.






















