Home ಜಿಲ್ಲೆ ಕಲಬುರಗಿ ಪ್ರಗತಿ ಸಾಧಿಸದ ಪಿಡಿಒಗಳಿಗೆ ನೋಟಿಸ್, ಸಾರ್ವಜನಿಕರ ಕರೆಗಳಿಗೆ ಕಡ್ಡಾಯ ಸ್ಪಂದನೆ ಜಿಪಂ ಸಿಇಒ ಖಡಕ್ ಸೂಚನೆ

ಪ್ರಗತಿ ಸಾಧಿಸದ ಪಿಡಿಒಗಳಿಗೆ ನೋಟಿಸ್, ಸಾರ್ವಜನಿಕರ ಕರೆಗಳಿಗೆ ಕಡ್ಡಾಯ ಸ್ಪಂದನೆ ಜಿಪಂ ಸಿಇಒ ಖಡಕ್ ಸೂಚನೆ

ಆಳಂದ:ಜೂ.27: ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಗಳಲ್ಲಿ ವೇಗ ಹೆಚ್ಚಿಸುವುದು, ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದಕ್ಕೆ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಾಹುಕ್ ಶಂಕನೂರ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್‍ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯಲ್ಲಿ ಕುಡಿಯುವ ನೀರಿನ ನಿಯಮಿತ ಗುಣಮಟ್ಟ ಪರೀಕ್ಷೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಮಾನವ ದಿನಗಳ ಸೃಜನೆ, ಇ-ಕೆವೈಸಿ ಪ್ರಗತಿ, ಸಾಮಗ್ರಿ ಮೊತ್ತಕ್ಕೆ ಇ-ಎಫ್‍ಎಂಎಸ್ ಸೃಜನೆ, ತೆರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್ ಯೋಜನೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಪಾವತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.
ಪ್ರತಿ ಗ್ರಾಮ ಪಂಚಾಯಿತಿಯ ಪ್ರಗತಿ ವರದಿಯನ್ನು ಅವಲೋಕಿಸಿದ ಸಿಇಒ ಅವರು, ನಿಗದಿತ ಗುರಿಗಳನ್ನು ತಲುಪಲು ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ವಿಶೇಷವಾಗಿ ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವ ಮೂಲಕ ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ಪ್ರಮಾಣ ಹೆಚ್ಚಿಸುವುದು, ಕುಡಿಯುವ ನೀರಿನ ಗುಣಮಟ್ಟದ ಮೇಲ್ವಿಚಾರಣೆ ನಡೆಸುವುದು ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಪಾವತಿ ಸಂಬಂಧ ಯಾವುದೇ ವಿಳಂಬ ಉಂಟಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಲಾಯಿತು.

ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳ ಕುರಿತು ವಿಶೇಷ ಗಮನ ಹರಿಸಿದ ಸಿಇಒ ಅವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮೊಬೈಲ್ ಫೆÇೀನ್‍ಗಳನ್ನು ಸ್ವಿಚ್ ಆಫ್ ಮಾಡದೆ ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದರು.
ಇದಲ್ಲದೆ, ವಿವಿಧ ಯೋಜನೆಗಳ ಅನುμÁ್ಠನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಹಾಗೂ ಸಭೆಗೆ ಗೈರುಹಾಜರಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ಬುಧವಾರ ತಾಲೂಕು ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಗುರಿ ಸಾಧನೆಗೆ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಜಿಲ್ಲಾ ಪಂಚಾಯಿತಿ ಎಇಇ ಸಂಗಮೇಶ, ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‍ಗಳು ಉಪಸ್ಥಿತರಿದ್ದರು.