೧೦ನೇ ತರಗತಿ ಫಲಿತಾಂಶ ಕಳಪೆ ಸಾಧನೆ ತೋರಿದ ಶಾಲಾ-ಕಾಲೇಜುಗಳಿಗೆ ನೋಟಿಸ್

ಕೋಲಾರ, ಜೂ.೧೪-ಕಳೆದ ವಷದ ಹತ್ತನೇ ತರಗತಿಯಲ್ಲಿ ಶೇಕಡಾ ೬೮.೩೭ ರಷ ದ್ವಿತೀಯ ಪಿಯುಸಿಯಲ್ಲಿ ೭೦.೪ ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದು ಉಳಿದ ವಿದ್ಯಾರ್ಥಿಗಳು ಯಾಕೆ ಉತ್ತೀರ್ಣರಾಗಿಲ್ಲ ಒಟ್ಟಾರೆ ಫಲಿತಾಂಶ ಯಾಕೆ ಕಡಿಮೆ ಬಂದಿದೆ ಎಂದು ಕೇಳಿ ಕಡಿಮೆ ಫಲಿತಾಂಶ ಬಂದಿರುವ ಕೆ.ಜಿ.ಎಪ್.ಮತ್ತು ಬಂಗಾರಪೇಟೆ ತಾಲ್ಲೂಕಿನ ಬಿ.ಇ.ಓ ಗಳಿಗೆ ಶೋಕಾಸ್ ನೋಟಿಸ್ ನೀಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ ಅವರು ಆದೇಶಿಸಿದರು.


ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಜಿಲ್ಲೆಯಲ್ಲಿ ಯಾಕೆ ಕುಂಠಿತ ಗೊಂಡಿರುವ ಮತ್ತು ಮುಂದಿನ ವಷದ ಕ್ರಿಯಾ ಯೋಜನೆಯನ್ನು ತಯಾರಿಸಿಕೊಳ್ಳುವಂತೆ ಹಾಗೂ ಶಾಲೆಗಳ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಸಭೆಯ ನಂತರ ಜಿಲ್ಲೆಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿಯ ಬಗ್ಗೆ ಸಭೆ ನಡೆಸಿದರು.


ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷವಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಹಲವು ಶಾಲೆಗಳು ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ತರಲು ವಿಫಲ ವಾಗಿವೆ.


ಶಾಲೆಯ ಒಂದು ಮಗುವನ್ನು ಪಾಸ್ ಮಾಡಿಸುವಷ ಕಲಿಸದ ಶಿಕ್ಷಕರಿಗೆ, ಆ ಶಾಲೆಯ ಮುಖ್ಯಸ್ಥರಿಗೆ ನಾಚಿಕೆ ಆಗಬೇಕು. ನಿಮ್ಮ ಶಿಕ್ಷಕ ವೃತ್ತಿ ನಿಮಗೆ ಆತ್ಮತೃಪ್ತಿ ನೀಡಿದೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅವರು ತಿಳಿಸಿದರು.


ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ೫೩ ಮಕ್ಕಳಿದ್ದು ಅವರನ್ನು ಮತ್ತೆ ಶಾಲೆಗೆ ಸೇರಿಸುವಂತೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅರಿವು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.


ಶಾಲೆಯಿಂದ ಯಾಕೆ ಹೊರಗುಳಿದಿದ್ದಾರೆ ಎಂದರೆ ವಿದ್ಯಾರ್ಥಿಗಳ ಕುಟುಂಬ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಲಸೆ ಹೋಗುತ್ತಿರುತ್ತಾರೆ ಆದ್ದರಿಂದ ಮಕ್ಕಳನ್ನು ಶಾಲೆಗೆ ಕಲಿಸುವುದಿಲ್ಲ ,ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಇಷ ಇಲ್ಲದಿರುವುದು,ಮಕ್ಕಳನ್ನು ಕೃಷಿ ಕೆಲಸಕ್ಕೆ ಬಳಿಸಿಕೊಂಡು ಶಾಲೆಗೆ ಕಲಿಸದೇ ಇರುವುದು ಇವೆಲ್ಲವೂ ಮಕ್ಕಳು ಶಾಲೆಯಿಂದ ಹೊರಗುಳಿಯಲು ಕಾರಣವಾಗಿವೆ ಅಧಿಕಾರಿಗಳು ಶೀಘ್ರವೇ ಅರಿವು ಕಾರ್ಯಕ್ರಮಗಳನ್ನು ಮಾಡಿ ಮತ್ತೆ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸುವಂತಹ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿದರು.


ಶಾಲೆಗಳಿಗೆ ಅನಧಿಕೃತವಾಗಿ ಗೈರಾಗುವ, ನಿಗಧಿತ ಸಮಯಕ್ಕೆ ಶಾಲೆಗೆ ಹೋಗದ ಮತ್ತು ಕಲಿಕೆಯಲ್ಲಿ ಪ್ರಗತಿ ಸಾಧಿಸದ ಶಿಕ್ಷಕರನ್ನು ಗುರುತಿಸಿ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು.


ಶೈಕ್ಷಣಿಕ ಸುಧಾರಣೆಗಾಗಿ ಮಿಷನ್ ಮೋಷದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಕೆಲಸ ಮಾಡಿದರೂ,ಸರಿಯಾದ ಸಾಧನೆ ಮಾಡಲಿಲ್ಲ.ಈ ಕಳಪೆ ಗುಣಮಟ್ಟದ ಸಾಧನೆಗೆ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಹೊಣೆ ಹೊರಬೇಕು.


ಕೈತುಂಬ ಸಂಬಳ, ಸೌಲಭ್ಯಗಳನ್ನು ನೀಡಿದ್ದರೂ ತಪ್ಪು ಒಪ್ಪಿಕೊಳ್ಳದೇ ಸಣ್ಣ ಪುಟ್ಟ ಕಾರಣ ನೀಡಿ, ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವದರಿಂದ ಯಾವ ಪ್ರಯೋಜನವಿಲ್ಲ ಎಂದು ಅವರು ಖಾರವಾಗಿ ನುಡಿದರು.


ಪ್ರತಿ ಶಿಕ್ಷಕನ ಕರ್ತವ್ಯಗಳ ಮೌಲ್ಯಮಾಪನ ಮಾಡುವ ಮತ್ತು ಗ್ರೇಡಿಂಗ್ ಮಾಡುವ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ. ಶಾಲಾ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಣೆ ಹಾಗೂ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನೀಡುವ ಕಾರ್ಯಗಳನ್ನು ಸಮರ್ಪಕವಾಗಿ ಮಾಡದೇ, ನಿಷಳಜಿ, ಕರ್ತವ್ಯಲೋಪ ಮಾಡುವ ಅಧಿಕಾರಿ ಮತ್ತು ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ.


ವಿಶೇಷವಾಗಿ ಸತತವಾಗಿ ಕಡಿಮೆ ಫಲಿತಾಂಶ ಮಾಡುತ್ತಿರುವ ಶಾಲೆಗಳಿಗೆ ಅಧಿಕಾರಿಗಳಿಂದ ಅನಿರೀಕ್ಷತ ಭೇಟಿ, ಪರಿಶೀಲನೆಗೆ ಆದೇಶಿಸಿ, ವರದಿ ಪಡೆಯಲಾಗುತ್ತದೆ ಎಂದು ಅವರು ತಿಳಿಸಿದರು.


ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಮೈಲಾರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೀತಮ್ಮ, ಲೋಕೋಪಯೋಗಿ ರಾಮಮೂರ್ತಿ, ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಅಮರಪ್ಪ, ಡಿಡಿಪಿಐ ಕೃಷಮೂರ್ತಿ, ಡಿಡಿಪಿಯು ಬಾಲಕೃಷ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.