
ಕಲಬುರಗಿ:ಮೇ.9: ಅ.ನ.ಕೃಷ್ಣರಾವ ಅವರು ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕರ್ನಾಟಕ, ಕನ್ನಡಪರ ಹೋರಾಟಗಾರರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ವಿಶೇಷವಾದ ಕಾದಂಬರಿಗಳು ನೀಡಿದ ಅವರು ‘ಕಾದಂಬರಿ ಸಾರ್ವಭೌಮ’ರಾಗಿ ಕನ್ನಡಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಖಾದ್ರಿ ಚೌಕ್‍ನಲ್ಲಿನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಅ.ನ.ಕೃಷ್ಣರಾವ್‍ರ 118ನೇ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.
ಅನಕೃ ಅವರು ಸಾಹಿತಿಗಳು ಮತ್ತು ಸಾಂಸ್ಕøತಿಕ ಹೋರಾಟಗಾರರು. ಸಂಧ್ಯಾರಾಗ, ನಟಸಾರ್ವಭೌಮ, ಉದಯರಾಗ, ಮಂಗಲಸೂತ್ರ, ಜೀವನಯಾತ್ರೆ, ಕನ್ನಡಮ್ಮನ ಗುಡಿಯಲ್ಲಿ ಸೇರಿದಂತೆ ನೂರಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿದ್ದಾರೆ. ಜೊತೆಗೆ ಪ್ರಬಂಧಕಾರ, ವಿಮರ್ಶಕ, ನಾಟಕಕಾರ ಮತ್ತು ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಬರವಣಿಗೆಯು ಹೆಚ್ಚಾಗಿ ಸಾಮಾಜಿಕ, ಐತಿಹಾಸಿಕ ಮತ್ತು ಕಲಾತ್ಮಕ ವಿಷಯಗಳನ್ನು ಒಳಗೊಂಡಿರುತ್ತದೆ. ಕನ್ನಡ ಭಾμÉ, ಸಾಹಿತ್ಯ ಮತ್ತು ಸಂಸ್ಕøತಿಯ ಉಳಿವಿಗಾಗಿ ಹೋರಾಡಿದ ಪ್ರಮುಖ ವ್ಯಕ್ತಿಗಳಲ್ಲಿ ಅ.ನ.ಕೃ ಒಬ್ಬರಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಲೇಖಕ ಶಿವಯೋಗೆಪ್ಪಾ ಎಸ್. ಬಿರಾದಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ, ರುಕ್ಸಾನಾ ಪಟೇಲ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು





















