
ಕಲಬುರಗಿ,ಸೆ.25: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಪರಿವರ್ತನೆ ಮತ್ತು ರಾಷ್ಟ್ರ ನಿರ್ಮಾಣ ಕುರಿತ ವಿಶೇಷ ಉಪನ್ಯಾಸ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಗುಲಾಬಿ ತೋಟವನ್ನು ಉದ್ಘಾಟಿಸಲಾಯಿತು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಹೈದರಾಬಾದ್ನ ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪೆÇ್ರ. ಘಂಟಾ ರಮೇಶ್ ಅವರು ಎನ್ಎಸ್ಎಸ್ ಸ್ವಯಂಸೇವಕರು ಹಳ್ಳಿಗಳೊಂದಿಗೆ ನೇರವಾಗಿ ತೊಡಗಿಸಿಕೊಂಡು, ಸಮುದಾಯದ ಅಭಿವೃದ್ಧಿಗೆ ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಎನ್ಎಸ್ಎಸ್ ಸ್ವಯಂಸೇವಕರು ಶಿಕ್ಷಣ ಮತ್ತು ಸಾಕ್ಷರತೆ, ಕಾನೂನು ಹಾಗೂ ಆರೋಗ್ಯ ಜಾಗೃತಿ, ಹಕ್ಕುಗಳ ಅರಿವು, ಚುನಾವಣಾ ಜಾಗೃತಿ ಮತ್ತು ಆರ್ಥಿಕ ಸಾಕ್ಷರತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಅಗತ್ಯವಿರುವವರಿಗೆ ಸೇವೆ ಸಲ್ಲಿಸುವುದು ಹಾಗೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವುದೂ ಶಿಕ್ಷಣದ ಪ್ರಮುಖ ಭಾಗವಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ, ಶ್ರೀ ಅರಬಿಂದೋ ಹಾಗೂ ವಿನೋಬಾ ಭಾವೆ ಅವರ ಆದರ್ಶಗಳನ್ನು ಉಲ್ಲೇಖಿಸಿದ ಪೆÇ್ರ. ರಮೇಶ್, ಸಮಾಜ ಸೇವೆ ಮತ್ತು ಅಗತ್ಯವಿರುವವರಿಗೆ ನೆರವು ನೀಡುವುದು ಜವಾಬ್ದಾರಿಯುತ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅತ್ಯಗತ್ಯ ಎಂದು ಹೇಳಿದರು. ವಿದ್ಯಾರ್ಥಿಗಳು ಎನ್ಎಸ್ಎಸ್ಗೆ ನೋಂದಾಯಿಸಿಕೊಂಡು ಅದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಯುಕೆ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ, ವಿದ್ಯಾರ್ಥಿಗಳು ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) 2020 ಸಮಗ್ರ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಎನ್ಎಸ್ಎಸ್ ಮತ್ತು ಎನ್ಸಿಸಿಯಂತಹ ಚಟುವಟಿಕೆಗಳ ಮಹತ್ವವನ್ನು ಗುರುತಿಸಿದೆ ಎಂದು ಹೇಳಿದರು.ಶೈಕ್ಷಣಿಕ ಜ್ಞಾನ ಮುಖ್ಯವಾದರೂ, ಸಮಾಜ ಸೇವೆಯ ಮೂಲಕ ದೊರೆಯುವ ಪ್ರಾಯೋಗಿಕ ಅನುಭವವು ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ವೃತ್ತಿಜೀವನಕ್ಕೆ ಸಹಕಾರಿಯಾಗುತ್ತದೆ ಎಂದು ಕುಲಪತಿಗಳು ಹೇಳಿದರು.
ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಮಾತನಾಡಿ, “ಇತರರಿಗೆ ನೆರವಾಗುವುದು ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವುದೇ ಎನ್ಎಸ್ಎಸ್ನ ಮೂಲ ಆಶಯ” ಎಂದು ಹೇಳಿದರು. ವಿದ್ಯಾರ್ಥಿಗಳು ಎನ್ಎಸ್ಎಸ್ನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಜೊತೆಗೆ, ವಿಶ್ವವಿದ್ಯಾಲಯದ ಆವರಣವನ್ನು ಸ್ವಚ್ಛ ಹಾಗೂ ಹಸಿರಾಗಿಡುವಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕ್ಯಾಂಪಸ್ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಸಾಮಾಜಿಕ ಜವಾಬ್ದಾರಿ ಕುರಿತು ಕಿರುನಾಟಕ ಪ್ರದರ್ಶಿಸಿದರು. ವಿಶ್ವವಿದ್ಯಾಲಯದ ಆವರಣದಲ್ಲಿ 60ಕ್ಕೂ ಹೆಚ್ಚು ಗುಲಾಬಿ ಗಿಡಗಳನ್ನು ನೆಡಲಾಯಿತು. ಎನ್ಎಸ್ಎಸ್ ಅಧಿಕಾರಿ ಹಾಗೂ ಕಾರ್ಯಕ್ರಮ ಸಂಯೋಜಕ ಡಾ. ಬುಚಿ ರೆಡ್ಡಿ ಪೆÇರೆಡ್ಡಿ ಅವರು ಸ್ವಾಗತಿಸಿದರು.
ಪೆÇ್ರ.ಜಿ.ಆರ್.ಅಂಗಡಿ, ಪೆÇ್ರ.ಎನ್.ಸತ್ಯನಾರಾಯಣ, ಪೆÇ್ರ. ದೊಡ್ಡಿ, ಡಾ.ಪಿ.ಎಸ್.ಕಟ್ಟಿಮನಿ, ಡಾ.ವಿ.ಸಾಯಿ ಅಭಿನವ, ಪೆÇ್ರ.ಪ್ರಶಾಂತ್, ಡಾ. ನಲ್ಲಸ್ವಾಮಿ, ಪೆÇ್ರ.ಜಯವೇಲ್, ಪೆÇ್ರ.ಅಮರೇಂದ್ರ ಮಸ್ತ, ಪ್ರೊ.ಆನಗುಂಟಿ ಸುರೇಶ್, ಡಾ.ಮಯೂರ್ ಪೂಜಾರ್, ಡಾ. ಮಿಶ್ರಾ, ಡಾ.ಆಶಾಲತ್ ಎಸ್., ಡಾ.ಬಾಗೇವಾಡಿ, ಡಾ.ಎಂ.ಶ್ರೀದೇವಿ, ಡಾ.ನಿಶಾ ಪ್ರಜಾಪತಿ ಮತ್ತು ಡಾ.ಮಂಡಲ ಚಂದ್ರಶೇಖರಗೌಡ್ ಸೇರಿದಂತೆ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.























