ಆರ್.ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕದ ಸಂಸ್ಥಾಪನಾ ದಿನಾಚರಣೆ

ಕಲಬುರಗಿ:ಸೆ.25: ನಗರದ ಸರದಾರ ವಲ್ಲಭಭಾಯಿ ಪಟೇಲ್ ಎಜ್ಯುಕೇಷನ್ ಟ್ರಸ್ಟ್ ಸಂಚಾಲಿತ ರಮಾಬಾಯಿ ಜಹಾಗೀರದಾರ್ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಓSS) ಘಟಕದ ವತಿಯಿಂದ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಚರಣೆಯ ಅಂಗವಾಗಿ ಪ್ರಾಚಾರ್ಯರಾದ ಡಾ|| ಭುರ್ಲಿ ಪ್ರಹ್ಲಾದ ಅವರು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ, ಧ್ಯೇಯ ಮತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಪ್ರೇರೇಪಿಸಿದರು. ಸ್ವಚ್ಛತೆ, ಗ್ರಾಮೋದ್ಧಾರ, ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಸ್ವಯಂಸೇವಕರಿಗೆ ಕರೆನೀಡಿದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಎನ್.ಎಸ್.ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಪ್ರಕಾಶ ಚವ್ಹಾಣ ಅವರು ರಾಷ್ಟ್ರೀಯ ಸೇವಾ ಯೋಜನೆ ಎಂದರೇನು? ಅದರ ಮಹತ್ವವನ್ನು ಸ್ವಯಂ ಸೇವಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಕೇದಾರ ದೀಕ್ಷಿತ್, ಉಪನ್ಯಾಸಕರಾದ ಮಹೇಶ ಕೆ, ಶಾಂತೇಶ ಹುಂಡೇಕಾರ, ಚಂದ್ರಭಾನು, ವಿದ್ಯಾರ್ಥಿಗಳು, ಹಾಗೂ ಸಿಬ್ಬಂಧಿ ಬಳಗ ಉಪಸ್ಥಿತರಿದ್ದರು.