Home ಮುಖಪುಟ ಸುದ್ದಿ ಎನ್ ಟಿ ಆರ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ

ಎನ್ ಟಿ ಆರ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ

ಬೆಂಗಳೂರು, ಮಾ.೮: ಖಾಸಗಿ ಕಾರ್ಯಕ್ರಮಕ್ಕಾಗಿ ನಗರಕ್ಕೆ ಬಂದಿದ್ದ ನಟ ಜ್ಯೂ.ಎನ್‌ಟಿಆರ್ ನೋಡಲು ಫ್ಯಾನ್ಸ್ ಮುಗಿಬಿದ್ದ ಘಟನೆ ವರದಿಯಾಗಿದೆ. ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸುವ ಸಲುವಾಗಿ ಲಘು ಲಾಠಿಚಾರ್ಜ್ ಮಾಡಿದ್ದಾರೆ.


ಮಹದೇವಪುರದ ನೂತನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಜ್ಯೂ.ಎನ್‌ಟಿಆರ್ ಆಗಮಿಸಿದ್ದರು. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಆಸ್ಪತ್ರೆ ಒಳಗಡೆ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಇದರಿಂದ ಎಸ್ಕಲೇಟರ್ ಮುರಿದು ಹೋಗಿದೆ.


ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ನಿಯಂತ್ರಣಕ್ಕೆ ಬರದಿದ್ದಾಗ, ಲಘ ಲಾಠಿ ಪ್ರಹಾರ ಮಾಡಿ ಜನರನ್ನು ನಿಯಂತ್ರಣಕ್ಕೆ ತಂದಿದ್ದಾರೆ.