
ಸಂಜೆವಾಣಿ ವಾರ್ತೆ,
ವಿಜಯಪುರ, ಆ.೨೬: ಇಂಡಿ ತಾಲೂಕಿನ ಶಿರಶ್ಯಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಬಿಸಿಯೂಟವನ್ನು ವಿಶೇಷವಾಗಿ ಸಿದ್ಧಪಡಿಸಿ ವಿತರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳಿಗೆ ಚಕ್ಕೋಲಿ, ಹಾಲು, ಹಪ್ಪಳ, ಅನ್ನ ಹಾಗೂ ಸಾರು ಒಳಗೊಂಡ ಬಿಸಿಯೂಟ ನೀಡಲಾಯಿತು.
ಮಕ್ಕಳಿಗೆ ಪೌಷ್ಟಿಕ ಹಾಗೂ ರುಚಿಕರ ಆಹಾರ ಒದಗಿಸುವ ಮೂಲಕ ಅವರ ಆರೋಗ್ಯ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬಿಸಿಯೂಟ ವ್ಯವಸ್ಥೆ ಮಾಡಲಾಗಿತ್ತು. ಶಾಲೆಯಲ್ಲಿ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಬಿಸಿಯೂಟ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಸಂತಸದಿAದ ಊಟ ಸವಿದರು.
ಬಿಸಿಯೂಟ ವಿತರಣೆಯ ಸಂದರ್ಭದಲ್ಲಿ ಶಾಲೆಯಲ್ಲಿನ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಮಕ್ಕಳಿಗೆ ಆಹಾರ ವಿತರಿಸುವ ವ್ಯವಸ್ಥೆಯನ್ನೂ ಗಮನಿಸಲಾಯಿತು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆ ಹಾಗೂ ಪೌಷ್ಟಿಕಾಂಶಕ್ಕೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಶಿಕ್ಷಕರು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸಾಯಬಣ್ಣ ಬೂದಿಹಾಳ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ವೈ. ಉಪ್ಪಾರ, ಶಾಲೆಯ ಮುಖ್ಯ ಶಿಕ್ಷಕ ಎಸ್.ಎಸ್. ಅಂಕಲಗಿ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.































