ಕಲಬುರಗಿ,ಆ.21:ಸದ್ಭಾವನಾ ದಿನಾಚರಣೆ ಪ್ರಯುಕ್ತ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಕಾರಾಗೃಹದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಈ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಸದ್ಭಾವನಾ ದಿನಾಚರಣೆಯ ಪ್ರಮಾಣ ವಚನವನ್ನು ಸ್ವೀಕರಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಕಚೇರಿಯ ಸಹಾಯಕ ಅಧೀಕ್ಷಕರಾದ ಚನ್ನಪ್ಪ, ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿಗಳಾದ ಭೀಮಾಶಂಕರ ಡಾಂಗೆ ಹಾಗೂ ಜೈಲರ್‍ಗಳಾದ ಸುನಂದ ವಿ. ಶ್ರೀಮಂತಗೌಡ ಪಾಟೀಲ್, ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಸಂಸ್ಥೆಯ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ಭಾಗವಹಿಸಿದರು.

























