Home ಜಿಲ್ಲೆ ಕರಾಳ ದಿನಾಚರಣೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಮುಷ್ಕರ

ಕರಾಳ ದಿನಾಚರಣೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಮುಷ್ಕರ

ವಿಜಯಪುರ, ಜು.11: ಸ್ಕೀಮ್ ನೌಕರರ ಕರಾಳ ದಿನಾಚರಣೆಯ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಶುಕ್ರವಾರ ಒಂದು ದಿನದ ಮುಷ್ಕರ ನಡೆಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಐಸಿಡಿಎಸ್ (IಅಆS) ಯೋಜನೆಗೆ ಹೆಚ್ಚಿನ ಅನುದಾನ, ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಜಿಲ್ಲಾ ಅಧ್ಯಕ್ಷೆ ಸುನಂದ ನಾಯಕ ಮಾತನಾಡಿ, ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಗೆ ನೀಡುತ್ತಿರುವ ಅನುದಾನವನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸದೆ ಕಡಿಮೆ ಮಾಡುತ್ತಿರುವುದು ಹಾಗೂ 2017ರಿಂದ ಪೌಷ್ಠಿಕ ಆಹಾರದ ಘಟಕ ವೆಚ್ಚವನ್ನು ಹೆಚ್ಚಿಸದಿರುವುದು ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ (ಓಇP-2020) ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಜೊತೆಗೆ ಪೌಷ್ಠಿಕ ಆಹಾರ ವಿತರಣೆಯಲ್ಲಿ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸುವ ಕ್ರಮಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಗೌರವಾಧ್ಯಕ್ಷೆ ಭಾರತಿ ವಾಲಿ ಮಾತನಾಡಿ, ಚುನಾವಣೆ ವೇಳೆ ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ?15,000 ಹಾಗೂ ಸಹಾಯಕಿಯರಿಗೆ ?10,000 ವೇತನ ಹೆಚ್ಚಳ ಜಾರಿಗೊಳಿಸಬೇಕು. ಸಾಮಾಜಿಕ ಭದ್ರತೆ, ಕನಿಷ್ಠ ಕೂಲಿ ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ವಿಸ್ತರಣೆ ಮಾಡಬೇಕು. 3-6 ವರ್ಷದ ಮಕ್ಕಳಿಗೆ ಆರಂಭಿಕ ಬಾಲ್ಯ ಆರೈಕೆ ಹಾಗೂ ಶಿಕ್ಷಣದ ಹಕ್ಕನ್ನು ಕಾನೂನಿನ ಮೂಲಕ ಖಾತರಿಪಡಿಸಬೇಕು. 2011ರಿಂದ ನಿವೃತ್ತರಾದವರಿಗೆ ಗ್ರಾಚ್ಯುಟಿ ಪಾವತಿಸಬೇಕು ಹಾಗೂ ಅಂಗನವಾಡಿ ನೌಕರರನ್ನು ಬಿಎಲ್‍ಓ ಸೇರಿದಂತೆ ಇಲಾಖೇತರ ಕೆಲಸಗಳಿಂದ ಸಂಪೂರ್ಣ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.
ಸರಸ್ವತಿ ಮಠ ಮಾತನಾಡಿ, ‘ಪೆÇೀಷಣ್ ಟ್ರ್ಯಾಕರ್’ ಸೇರಿದಂತೆ ಡಿಜಿಟಲ್ ಕೆಲಸಗಳ ಹೆಸರಿನಲ್ಲಿ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಮೊಬೈಲ್, ಡೇಟಾ ವೆಚ್ಚ ಮರುಪಾವತಿ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಉಪಕರಣಗಳು ಹಾಗೂ ಸ್ಥಳೀಯ ತಾಜಾ ಪೌಷ್ಟಿಕ ಆಹಾರ ಒದಗಿಸಬೇಕು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸಿ, 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸುಗಳಂತೆ ಕನಿಷ್ಠ ವೇತನ ಮತ್ತು ಪಿಂಚಣಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಖಜಾಂಚಿ ಪ್ರತಿಭಾ ಕುರಡೆ, ಶೋಭಾ ಕೊಡತೆ, ಸುವರ್ಣ ಹಲಗಣಿ, ಗಿರಿಜಾ ಸಕ್ರಿ ಸೇರಿದಂತೆ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು.