Home ಜಿಲ್ಲೆ ಕಲಬುರಗಿ ಅಂತರಾಷ್ಟ್ರೀಯ ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹ ನಿರ್ಮೂಲನಾ ದಿನ ಆಚರಣೆ

ಅಂತರಾಷ್ಟ್ರೀಯ ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹ ನಿರ್ಮೂಲನಾ ದಿನ ಆಚರಣೆ

ಕಲಬುರಗಿ,ನ.28-ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯ ವಾಣಿ-1098/112, ಡಾನ್ ಬಾಸ್ಕೋ ಸಂಸ್ಥೆ, ಮಾರ್ಗದರ್ಶಿ ಸಂಸ್ಥೆ ಹಾಗೂ ನವದೆಹಲಿಯ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಜೇವರ್ಗಿ ಕಾಲೋನಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರಿಯ ಬಾಲ್ಯ ವಿವಾಹ & ಬಲವಂತದ ವಿವಾಹ ನಿರ್ಮೂಲನಾ ದಿನ” ಆಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಿಶ್ವರಾಧ್ಯ ಇಜೇರಿ, ನಗರ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಮೇಲ್ವಿಚಾರಕಿ ಅಶ್ವಿನಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ, ಫಾವಾರ್ಡ್ ಕೆ ಅಧ್ಯಕ್ಷ ಮಸ್ತಾನ್ ಬಿರಾದಾರ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ ನಿರ್ದೇಶಕ ವಿಠ್ಠಲ ಚಿಕಣಿ, ಡಾನ್ ಬಾಸ್ಕೊ ಸಂಸ್ಥೆ ಸಂಯೋಜಕರಾದ ಗೀತಾ, ಮಕ್ಕಳ ಸಹಾಯವಾಣಿ ಕಾರ್ಯಕ್ರಮ ಸಂಯೋಜಕ ಬಸವರಾಜ ತೆಂಗಳಿ, ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜ್, ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕ ಮಲ್ಲಯ್ಯ ಗುತ್ತೇದಾರ, ಮಾರ್ಗದರ್ಶಿ ಸಂಸ್ಥೆ ಸಂಯೋಜಕರಾದ ಶೀತಲ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ಸುಜಾತಾ ವಹಿಸಿದ್ದರು.
ಕಾರ್ಯಕ್ರಮದಲ್ಲಿ *ಬಾಲ್ಯವಿವಾಹ ಮುಕ್ತ ಭಾರತ ಕುರಿತು ಅರಿವು & ಪ್ರತಿಜ್ಞಾ ವಿಧಿ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಡಾನ್ ಬಾಸ್ಕೋ ಸಂಸ್ಥೆಯ ಸಿಬ್ಬಂದಿಗಳು, ಮಾರ್ಗದರ್ಶಿ ಸಂಸ್ಥೆಯ ಮ್ಯಾನೇಜರ್ & ಸಿಬ್ಬಂದಿಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಧ್ಯಾಪಕರು & ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಒಟ್ಟು 200ಕ್ಕೂ ಹೆಚು ಮಕ್ಕಳು ಭಾಗವಹಿಸಿದರು.