ತುಮಕೂರು, ಅ. ೬- ನಗರದಲ್ಲಿ ಅ. ೮ ರಂದು ನಡೆಯಲಿರುವ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗಮಿಸಲಿದ್ದಾರೆ.
ಕಾರ್ಮಿಕ ಭವನ ಉದ್ಘಾಟನೆ
ನಗರದ ಹನುಮಂತಪುರದ ಗಣೇಶ ನಗರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾರ್ಮಿಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲೂ ಸಹ ಸಚಿವ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ.
ಅ. ೮ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ನೂತನ ಕಾರ್ಮಿಕ ಭವನ ಉದ್ಘಾಟನೆಯನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ನೆರವೇರಿಸುವರು.
ಸಮಾರಂಭದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಕಾರ್ಮಿಕ ಸಚಿವ ಸಂತೋಷ್ ಲಾಡ್, ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ನಗರ ಶಾಸಕ ಜ್ಯೋತಿಗಣೇಶ್ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಮಂಜುನಾಥ್, ಶಾಸಕರಾದ ಕೆ.ಎನ್. ರಾಜಣ್ಣ, ಡಾ. ರಂಗನಾಥ್, ಸಿ.ಬಿ. ಸುರೇಶ್‌ಬಾಬು, ಎಂ.ಟಿ. ಕೃಷ್ಣಪ್ಪ, ಕೆ. ಷಡಕ್ಷರಿ, ಬಿ. ಸುರೇಶ್‌ಗೌಡ, ಹೆಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದಗೌಡ, ಆರ್. ರಾಜೇಂದ್ರ, ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಲೀನ್, ಕಾರ್ಮಿಯಕ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಭಾರತಿ ಡಿ., ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಜಿ. ಮಂಜುನಾಥ್, ಡಾ. ಎಸ್.ಬಿ. ರವಿಕುಮಾರ್ ಭಾಗವಹಿಸಲಿದ್ದಾರೆ.




























