ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು: ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.೧೧:ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ಪರಿಕ್ರಮ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಹಾಗೂ ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ಸಂಬAಧಿಸಿದ ಅಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮೀತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಯುವುದರ ಮೂಲಕ ಸುಗಮ ಸಂಚಾರ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬರುವ ರಾಷ್ಟಿçÃಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಬಹುದಾದ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ.
ಸುರಕ್ಷತಾ ದೃಷ್ಟಿಯಿಂದ ರಸ್ತೆ ಅಗಲೀಕರಣ ರಸ್ತೆ ಸುಧಾರಣೆ, ಅವಶ್ಯವಿರುವಲ್ಲಿ ಅಗತ್ಯ ಮಾಹಿತಿ ಫಲಕ, ಸೈನ್ ಬೋರ್ಡ್, ಸೋಲಾರ್ ಬ್ಲಿಂಕರ್ಸ್ ಹಾಗೂ ಸರ್ವಿಸ್ ರಸ್ತೆಯಲ್ಲಿ ಬ್ಯಾರಿಕ್ಯಾಡ್ ಅಳವಡಿಕೆ, ರಸ್ತೆಗಳ ಮೇಲೆ ಅನಧಿಕೃತ ಪಾರ್ಕಿಂಗ್ ಮಾಡದಂತೆ ನಿಗಾವಹಿಸಬೇಕು, ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆಯಾಗುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದರು. ಕೆಲವು ಕಡೆ ಅಂಗಡಿಕಾರರು ರಸ್ತೆ ಒತ್ತುವರಿ ಮಾಡಿಕೊಂಡಿದ್ದು, ಅಂಗಡಿ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದರು.
ಇಂತಹ ಒತ್ತುವರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಅವಶ್ಯಕತೆಯಿರುವಲ್ಲಿ ಸಿಸಿಟಿವಿ ಹಾಗೂ ವಿವಿಧೆೆಡೆ ಇರುವ ವೃತ್ತಗಳಲ್ಲಿ ಸೂಚನಾ ಫಲಕ ಹಾಗೂ ರಸ್ತೆ ಮಾರ್ಗ ಸೂಚಿಗಳನ್ನು ಅಳವಡಿಸಬೇಕು. ಜನದಟ್ಟಣೆ ಹಾಗೂ ಅಪಘಾತಕ್ಕೆ ಕಾರಣವಾಗುವ ಸಂಭವನೀಯ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಅನುವುಗೊಳಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯ ಕೊಲ್ಹಾರ ಸೇತುವೆ ಮೇಲೆ ಬೀದಿ ದೀಪಗಳನ್ನು ಈಗಾಗಲೇ ಅಳವಡಿಸಲು ಕ್ರಮ ವಹಿಸಲಾಗಿದ್ದು, ಸೇತುವೆಗಳ ಮೇಲೆ ಸಂಚರಿಸುವ ವಾಹನಗಳ ನಂಬರ್ ಎದ್ದು ಕಾಣುವ ಹಾಗೂ ರಾತ್ರಿ ವ್ಹಿಜನ್ ಇರುವ ಗುಣಮಟ್ಟದ ಸಿಸಿಟಿವಿ ಅಳವಡಿಸಲು ಸಂಬAಧಿಸಿದ ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟೋಲ್‌ಗಳಲ್ಲಿ ದ್ವಿಚಕ್ರ ವಾಹನ ಸಂಚರಿಸುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿ ನಿಗಾವಹಿಸಬೇಕು. ರಸ್ತೆಯ ತಿರುವುಗಳಲ್ಲಿ ಅಗತ್ಯ ಮಾಹಿತಿ ಹಾಗೂ ಸೂಚನಾ ಫಲಕ ಅಳವಡಿಸಿಕೊಂಡು ರಸ್ತೆ ಅಪಘಾತ ತಡೆಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ರಾಷ್ಟಿçÃಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಕೈಕೊಂಡಿರುವ ಕ್ರಮಗಳ ಕುರಿತು ಹಾಗೂ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸಂಬAಧಿಸಿದ ಅಧಿಕಾರಿಗಳಿಗೆ ಪಿಪಿಟಿ ಮೂಲಕ ಸಮಗ್ರ ಮಾಹಿತಿ ನೀಡಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಈ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧ ವಸ್ತçದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.