
ಶಿರಹಟ್ಟಿ,ಅ೧೨: ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಳಲಾಪುರ ಗ್ರಾಮದ ಕೆರೆಯಲ್ಲಿ ವಿಬಿಜಿ-ರಾಮ್-ಜಿ ಯೋಜನೆಯಡಿ ಕೆರೆ ಪುನಶ್ಚೇತನಗೊಳಿಸುವ ಸಮುದಾಯ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಗ್ರಾಮದ ಜಲಸಂಪನ್ಮೂಲ ಸಂರಕ್ಷಣೆ ಹಾಗೂ ಕೆರೆಯ ಪುನಶ್ಚೇತನಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ಕಾಮಗಾರಿಯ ಸ್ಥಳಕ್ಕೆ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿಯ ಪ್ರಗತಿ, ಸ್ಥಳೀಯ ಅಗತ್ಯತೆ ಹಾಗೂ ಕೈಗೊಳ್ಳಲಾಗುತ್ತಿರುವ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ನಿಗದಿತ ಮಾನದಂಡಗಳAತೆ ಕಾಮಗಾರಿ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಹಾಯಕ, ಜಿ.ಕೆ.ಎಂ., ಕೂಲಿ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.























