
ಕೊಲ್ಹಾರ :ಡಿ.೬:೧೫ನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಗ್ರಿ ವೆಚ್ಚ ಬಿಡುಗಡೆಗೊಳಿಸಲು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿ,೯ ರಂದು ಗ್ರಾಪಂ ಸದಸ್ಯರು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ ಪಾಟೀಲ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ೨೦೨೫-೨೬ ನೇ ಸಾಲಿಗೆ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಯಾಗಬೇಕಾದ ೧೫ನೇ ಹಣಕಾಸು ಆಯೋಗದ ಅನುದಾನ ಇದುವರೆವಿಗೂ ಬಿಡುಗಡೆಯಾಗಿರುವುದಿಲ್ಲ. ಅದ್ದರಿಂದ ಕೂಡಲೇ ಕೇಂದ್ರ ಸರ್ಕಾರದಿಂದ ಸದರಿ ಅನುದಾನವನ್ನು ತರಿಸಿಕೊಂಡು ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳಬೇಕು.
ಉದ್ಯೋಗಖಾತ್ರಿ ಯೋಜನೆಯಲ್ಲಿ ಅನುಷ್ಠಾನ ಮಾಡಿರುವ ಕಾಮಗಾರಿಗಳಿಗೆ ಸಂಬAಧಿಸಿದ ಸಾಮಗ್ರಿ ವೆಚ್ಚ, ೨೦೨೫ ಜನವರಿಯಿಂದ ಇದುವರೆವಿಗೂ ಬಿಡುಗಡೆಯಾಗಿರುವುದಿಲ್ಲ. ಆದ್ದರಿಂದ ಕೂಡಲೇ ಸಾಮಗ್ರಿ ವೆಚ್ಚ ಬಿಡುಗಡೆಗೆಗೊಳಿಸಬೇಕು.
ಗ್ರಾಮ ಪಂಚಾಯತಿ ಹಂತದ ಗ್ರಂಥಾಲಯಗಳ( ಅರಿವು ಕೇಂದ್ರ) ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರದಿಂದ ೧೨ ಸಾವಿರ ರೂಗಳು, ಗ್ರಾಮ ಪಂಚಾಯತಿಗಳು ಸಂಗ್ರಹಿಸುವ ಗ್ರಂಥಾಲಯ ಕರ ಹಾಗೂ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೀಗೆ ಮೂರು ಮೂಲಗಳಿಂದ ಹಣ ಸಂಗ್ರಹಿಸಿ ಮಾಸಿಕ ಕನಿಷ್ಠ ವೇತನ ನೀಡಲಾಗುತ್ತಿದೆ. ಇದರಿಂದಾಗಿ ಗ್ರಾಮ ಪಂಚಾಯತಿಗಳ ಮೇಲೆ ಆರ್ಥಿಕ ಹೊರೆ ಉಂಟಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವೇ ಗ್ರಂಥಾಲಯ ಮೇಲ್ವಿಚಾರಕರ ಮಾಸಿಕ ಕನಿಷ್ಠವೇತನವನ್ನು ಸಂಪೂರ್ಣವಾಗಿ ಭರಿಸಬೇಕು. ಗ್ರಾಮ ಪಂಚಾಯತಿಗಳ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜೀವಿನಿ ಸಂಘಗಳ ಮಹಿಳೆಯರು, ತ್ಯಾಜ್ಯ ಸಂಗ್ರಹಣೆ ಮತ್ತು ಮಾರಾಟದ ಮೂಲಕ ಮಾಸಿಕ ಗೌರವ ಧನ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರುಗಳು ಗ್ರಾಮ ಪಂಚಾಯತಿಗಳನ್ನು ಅವರ ಮಾಸಿಕ ಗೌರವ ಧನಕ್ಕಾಗಿ ಒತ್ತಾಯಿಸುತ್ತಿದ್ದು, ಗಾಮ ಪಂಚಾಯತಿಗಳಿಗೆ ಅದು ಕಷ್ಠಸಾಧ್ಯವಾಗಿರುತ್ತದೆ. ಆದ್ದರಂದ ರಾಜ್ಯ ಸರ್ಕಾರವೇ ಅವರ ಮಾಸಿಕ ಗೌರವ ಧನ ಭರಿಸಬೇಕುಕೂಸಿನ ಮನೆ ಕಾರ್ಯಕರ್ತೆಯರಿಗೆ ಉದೋಗ ಖಾತ್ರಿ ಯೋಜನೆಯಿಂದ ಗೌರವ ಧನ ನೀಡಲು ಸಾಧ್ಯವಿಲ್ಲವೆಂದು ಇತ್ತೀಚೆಗೆ ಕೇಂದ್ರ ಸರ್ಕಾರ ಸ್ಟಷ್ಟಪಡಿಸಿದೆ. ಆದ್ದರಿಂದ ಅವರಿಗೂ ಸಹ ರಾಜ್ಯ ಸರ್ಕಾರವೇ ಮಾಸಿಕ ಗೌರವ ಧನ ನೀಡಬೇಕು.
ಈ ಹಿಂದೆ ನಮ್ಮ ಮಹಾ ಒಕ್ಕೂಟವು ೨೮ ಬೇಡಿಕೆಗಳನ್ನು ಸರ್ಕಾದ ಮುಂದಿಟ್ಟು ಹೋರಾಟ ಮಾಡಿತ್ತು ಅವುಗಳಲ್ಲಿ ಅನೇಕ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಈಡೇರಿಸಿದ್ದು, ಉಳಿಕೆ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು. ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ರಾಜ್ಯ ಸರ್ಕಾದ ಮುಂದಿಟ್ಟು ಕೂಡಲೇ ಈಡೇರಿಸಲು ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟದ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ದಿನಾಂಕ ೯-೧೨-೨೦೨೫ ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಒಕ್ಕೂಟದ ರಾಜ್ಯ ಮುಖಂಡರಾದ ಪ್ರದೀಪ ಪಾಟೀಲ ತಿಳಿಸಿದ್ದಾರೆ.

























