
ಧಾರವಾಡ, ನ.೧೨: ಅಕ್ಕಮಹಾದೇವಿ, ಕಿತ್ತೂರ ರಾಣಿ ಚೆನ್ನಮ್ಮ, ಹೇಮರೆಡ್ಡಿ ಮಲ್ಲಮ್ಮ ಹಾಗೂ ಒನಕೆ ಓಬವ್ವ ಅವರಂತಹ ವೀರ ಮಹಿಳೆಯರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಸಾಧನೆಗಳನ್ನು ಸ್ಮರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರುಬೆಳಿಗ್ಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದರು. ಆದರೆ ಇಂದು ಮಹಿಳೆಯರು ಆಕಾಶದ ಎತ್ತರಕ್ಕೆ ಬೆಳೆದಿದ್ದಾರೆ. ಪೈಲಟ್ಗಳಾಗಿ, ರೈಲ್ವೆ ಮತ್ತು ವಿಮಾನಯಾನ ಕ್ಷೇತ್ರಗಳಲ್ಲಿ, ನೌಕಾಯಾನದಲ್ಲಿ ಹಾಗೂ ಸೈನ್ಯದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಈ ಬದಲಾವಣೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಮರೆಯುವಂತಿಲ್ಲ. ಇಂದು ನಾವು ಈ ಸಭಾಂಗಣದಲ್ಲಿ ಕುಳಿತು ಮಾತನಾಡಲು ಸಾಧ್ಯವಾಗಿರುವುದು ಅವರು ನೀಡಿದ ಸಂವಿಧಾನಿಕ ಹಕ್ಕುಗಳು ಮತ್ತು ಅವಕಾಶಗಳ ಫಲವಾಗಿದೆ ಎಂದು ಅವರು ತಿಳಿಸಿದರು.
ಮಹಿಳೆಯರಿಗೆ ಮತದಾನದ ಹಕ್ಕು ಸೇರಿದಂತೆ ಸಮಾನ ಹಕ್ಕುಗಳನ್ನು ಕಲ್ಪಿಸುವಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ. ಇಂದಿಗೂ ಅನೇಕ ಅಭಿವೃದ್ಧಿ ಹೊಂದಿದ ರಾ?À್ಟ್ರಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಮತದಾನದ ಹಕ್ಕು ದೊರೆಯದಿರುವ ಉದಾಹರಣೆಗಳಿವೆ. ಆದರೆ ನಮ್ಮ ದೇಶದಲ್ಲಿ ೧೮ ವ?Àð ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕಲ್ಪಿಸಲಾಗಿದೆ. ಇದು ನಮ್ಮ ಸಂವಿಧಾನದ ಶಕ್ತಿಯಾಗಿದೆ ಎಂದು ಅವರು ಹೇಳಿದರು.
ಚಿತ್ರದುರ್ಗದ ಮದಕರಿ ನಾಯಕನ ಕಾಲದಲ್ಲಿ ಮಹಿಳೆಯರು ಮತ್ತು ಹಿಂದುಳಿದ ಸಮುದಾಯಗಳಿಗೆ ಶಿಕ್ಷಣ ಹಾಗೂ ಅವಕಾಶಗಳು ಸೀಮಿತವಾಗಿದ್ದವು. ಅಂತಹ ಪರಿಸ್ಥಿತಿಯಲ್ಲಿಯೂ ಮಹಿಳೆಯರು ತಮ್ಮ ಧೈರ್ಯ ಮತ್ತು ಸಾಮರ್ಥ್ಯದಿಂದ ಇತಿಹಾಸದಲ್ಲಿ ಸ್ಥಾನ ಪಡೆದಿದ್ದಾರೆ. ಇಂದು ಜಾತಿ, ಧರ್ಮಗಳ ಎಲ್ಲೆ ಮೀರಿ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದಾರೆ.
ಒನಕೆ ಓಬವ್ವ ಅವರ ಸಾಹಸವನ್ನು ವಿವರಿಸಿದ ಅವರು, ಚಿತ್ರದುರ್ಗ ಕೋಟೆಯನ್ನು ವಶಪಡಿಸಿಕೊಳ್ಳಲು ಹೈದರಾಲಿಯ ಸೈನಿಕರು ಕಿಂಡಿಯ ಮೂಲಕ ಒಳನುಸುಳಲು ಪ್ರಯತ್ನಿಸಿದ ಸಂದರ್ಭದಲ್ಲಿ ಒನಕೆ ಓಬವ್ವ ಅವರು ನೀರು ತರಲು ಹೋಗಿದ್ದ ವೇಳೆ ಈ ಘಟನೆಯನ್ನು ಗಮನಿಸಿದರು. ತಕ್ಷಣವೇ ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಒನಕೆಯನ್ನು ಕೈಗೆತ್ತಿಕೊಂಡು ಶತ್ರು ಸೈನಿಕರನ್ನು ಎದುರಿಸಿದರು. ತಮ್ಮ ಸಮಯಪ್ರಜ್ಞೆ, ಧೈರ್ಯ ಹಾಗೂ ದೇಶಪ್ರೇಮದಿಂದ ಕೋಟೆಯನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು ಎಂದು ಅವರು ತಿಳಿಸಿದರು.
ಓಬವ್ವ ಅವರು ಯುದ್ಧಕಲೆ ಕಲಿತವರಾಗಿರಲಿಲ್ಲ. ಆದರೂ ಎದುರಾದ ಅಪಾಯವನ್ನು ಧೈರ್ಯದಿಂದ ಎದುರಿಸಿ ಶತ್ರು ಸೈನಿಕರನ್ನು ಹಿಮ್ಮೆಟ್ಟಿಸಿದರು. ಈ ಘಟನೆಯು ಯಾವುದೇ ಸಮಸ್ಯೆ ಎದುರಾದಾಗ ಸಮಯಪ್ರಜ್ಞೆ ಹಾಗೂ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿದರೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಅನೇಕ ಸವಾಲುಗಳು ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ಧೃತಿಗೆಡದೆ ಸಮಸ್ಯೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಒನಕೆ ಓಬವ್ವ ಅವರ ಜೀವನ ನಮಗೆ ಇದೇ ಸಂದೇಶ ನೀಡುತ್ತದೆ. ಇಂದಿನ ಕಾಲದಲ್ಲಿ ನನಗೆ ಸಾಫ್ಟ್ವೇರ್ ಗೊತ್ತಿಲ್ಲ, ಕಚೇರಿ ಕೆಲಸ ನಿರ್ವಹಿಸಲು ಬರುವುದಿಲ್ಲ ಎಂದು ಹಿಂದೆ ಸರಿಯಬಾರದು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಮನಃಪೂರ್ವಕವಾಗಿ ಪ್ರಯತ್ನಿಸಿದರೆ ಪರಿಹಾರ ಕಂಡುಕೊಳ್ಳಬಹುದು. ಒನಕೆ ಓಬವ್ವ ಅವರ ಸಾಧನೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ದಲಿತ ಸಾಹಿತ್ಯ ಪರಿ?Àತ್ತು ಜಿಲ್ಲಾಧ್ಯಕ್ಷ ಡಾ.ಶರೀಫ ಮಾಕಪ್ಪನವರ ಅವರು ವೀರವನಿತೆ ಒನಕೆ ಓಬವ್ವ ಅವರ ಕುರಿತು ವಿಶೇ?À ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸAಜೀವ ಕುಂದಗೋಳ ಅವರ ತಂಡದಿAದ ಒನಕೆ ಓಬವ್ವ ಅವರ ಸಾಹಸ, ಧೈರ್ಯ ಹಾಗೂ ದೇಶಪ್ರೇಮವನ್ನು ಬಿಂಬಿಸುವ ನೃತ್ಯ ಪ್ರದರ್ಶನ ನಡೆಯಿತು. ತಂಡದ ಕಲಾವಿದರು ನೃತ್ಯದ ಮೂಲಕ ಒನಕೆ ಓಬವ್ವ ಅವರ ವೀರಗಾಥೆಯನ್ನು ಪ್ರದರ್ಶಿಸಿದರು.
ವೇದಿಕೆಯಲ್ಲಿ ಸಮಾಜ ಮುಖಂಡರಾದ ರಾಮಣ್ಣ ಗಡ್ಡದ, ವಾಯ್.ಬಿ.ಚಲವಾದಿ, ಸಿ.ಎಂ.ಕಾಳೆ, ಯಲ್ಲಪ್ಪ ಮಂಟೂರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.





















