ಸಿಯುಕೆಯಲ್ಲಿ ಒಂದು ದಿನದ ರಾಷ್ಟ್ರೀಯ ಕರ್ಮಯೋಗಿ ತರಬೇತಿ

ಕಲಬುರಗಿ,ಸೆ.9: ಕೇಂದ್ರ ಸರಕಾರದ ಸಂಸ್ಥೆಗಳ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ರಾಷ್ಟ್ರೀಯ ಕರ್ಮಯೋಗಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಹೇಳಿದರು. ಅವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಯುಜಿಸಿ ಮತ್ತು ಸಾಮಥ್ರ್ಯ ನಿರ್ಮಾಣ ಆಯೋಗ ಸಹಯೋಗದಲ್ಲಿ ಒಂದು ದಿನದ ರಾಷ್ಟ್ರೀಯ ಕರ್ಮಯೋಗಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅವರು ಮುಂದುವರಿದು ಮಾತನಾಡಿ “ನಾವೆಲ್ಲರೂ ವಿಶ್ವವಿದ್ಯಾಲಯದ ಮಾಲಿಕತ್ವವನ್ನು ವಹಿಸಿಕೊಳ್ಳಬೇಕು ಹಾಗೂ ಜವಾಬ್ದಾರಿ ಮತ್ತು ಶ್ರದ್ಧೆ ಯಿಂದ ಕಾರ್ಯನಿರ್ವಹಿಸಬೇಕು. ಹಾಗಾದರೆ ಮಾತ್ರ ವಿಶ್ವವಿದ್ಯಾಲಯವನ್ನು ಉನ್ನತ ಮಟ್ಟಕ್ಕೆ ಒಯ್ಯಲು ಸಾಧ್ಯ. ಗುಣಾತ್ಮಕ ಶಿಕ್ಷಣ ನೀಡಲು ನಾವು ಫಲಿತಾಂಶ ಆಧಾರಿತ ಪಠ್ಯಕ್ರಮ, ಬೋಧನೆ ಮತ್ತು ಪರೀಕ್ಷೆಗಳ ವ್ಯವಸ್ಥೆಯನ್ನ ಅಳವಡಿಸಿಕೊಳ್ಳಬೇಕು. ಹಾಗೂ ಅಷ್ಟೇ ಶ್ರದ್ಧೆಯಿಂದ ಬೋಧನೆ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವ ಪೆÇ್ರ. ಆರ್ ಆರ್ ಬಿರಾದಾರ್ ಮಾತನಾಡಿ ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಗುಣಮಟ್ಟದ ಸೇವೆಯನ್ನು ನೀಡಲು ನಾವು ಸೇವೆ ನೀಡುವ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ. ವಿಕಸಿತ ಭಾರತವನ್ನು ಸಾಧಿಸಲು ನಾವು ನಿಯಮ ಆಧಾರಿತ ಸೇವೆಗಿಂತ ಜವಾಬ್ದಾರಿ ಆಧಾರಿತ ಸೇವೆಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕ ಡಾ. ರವೀಂದ್ರನಾಥ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು, ತರಬೇತಿದಾರ ಪೆÇ್ರ. ಸಂದೀಪ್ ರಣಭೀರಕರ್ ಸ್ವಾಗತಿಸಿದರು, ಮುಖ್ಯ ತರಬೇತಿದಾರ ಡಾ. ಪಿ ಎಸ್ ಕಟ್ಟಿಮನಿ ಪ್ರಸ್ತಾವಿಕವಾಗಿ ಮಾತನಾಡಿದರು, ಡಾ. ಶೇಖ ಅಜರುದ್ದೀನ್ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.