ಒಂದು ದಿನದ ತರಬೇತಿ ಕಾರ್ಯಾಗಾರ

ಧಾರವಾಡ, ಜ.29: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ವಿದ್ಯಾವರ್ದಕ ಸಂಘ, ಮಕ್ಕಳ ಸಹಾಯವಾಣಿ-1098/112, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಅವರು ಮಾತನಾಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾವು ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ತಾವು ಕ್ರಮ ವಹಿಸುತ್ತಿರುವುದು ಶ್ಲಾಘನೀಯ, ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದು ಮಕ್ಕಳು ಶಾಲೆಯಿಂದ ಹೊರಗುಳಿದ ಅಥವಾ ಯು.ಡಿ.ಐ.ಡಿ ಕಾರ್ಡ ಅಥವಾ ಚಿಕಿತ್ಸೆ ಬಗ್ಗೆ ಗಮನ ಹರಿಸಿ ಮಕ್ಕಳ ಶ್ರೇಯಸ್ಸಿಗೆ ತಾವು ಕೆಲಸವನ್ನು ನಿರ್ವಹಿಸಬೇಕು, ಸಮಾಜದಲ್ಲಿ ಬುದ್ದಿ ಮಾಂದ್ಯ ಹೊಂದಿರುವ ಅಥವಾ ವಿಕಲಚೇತನ ಮಕ್ಕಳನ್ನು ಅಕ್ಕ ಪಕ್ಕದವರು ದುರ್ಬಳಕೆ ಮಾಡುತ್ತಿರುವುದನ್ನು ಗಮನಿಸಬೇಕು. 0-18 ವರ್ಷದ ಮಕ್ಕಳ ಹಕ್ಕುಗಳನ್ನು ಗಮನಿಸಿ ನಿಮ್ಮ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕುಗಳನ್ನು ಉಲ್ಲಂಘನೆಯಾದ ಸಂದರ್ಭದಲ್ಲಿ ಅದನ್ನು ಪ್ರತಿಭಟಿಸುವಂತೆ ತಿಳಿಸಿದರು ಮಕ್ಕಳ ಸಹಾಯವಾಣಿ 1098ನ್ನು ಬಳಸಿ ಮಕ್ಕಳ ಸಮಸ್ಯೆ ಕುರಿತು ಕರೆ ಮಾಡಿ ತಿಳಿಸಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಅತೀ ಹೆಚ್ಚು ಮಕ್ಕಳ ಹಕ್ಕುಗಳ ಗ್ರಾಮ ಸಭೆ ಆಯೋಜಿಸುತ್ತಿರುವ ಒಳ್ಳೆಯ ಸಂಗತಿ, ಮಕ್ಕಳ ಮೇಲೆ ಆಗುವ ದೌರ್ಜನ್ಯಗಳು ಅತೀ ಹೆಚ್ಚು ಕುಟುಂಬ ಸಂಬಂಧಿಕರು, ಹತ್ತಿರದವರಿಂದ ಆಗುವುದು ವಿಷಾಧನೀಯ ಎಂದು ತಿಳಿಸಿದರು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅವರು ಮಾತನಾಡಿ, ರಾಷ್ಟ್ರೀಯ ಕಾನೂನು ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸ್ಪಷ್ಟ ನಿರ್ದೇಶನದ ಮೇರೆಗೆ ಮಹಿಳೆಯರಿಗೆ, ದುರ್ಬಲರಿಗೆ, ಮಕ್ಕಳ ನಿರ್ಗತಿಕರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ನೆರವುಗಳನ್ನು ಕೊಡಲಾಗುತ್ತಿದೆ. ಕಾನೂನು ಸೇವೆಗಳ ಪ್ರಾಧಿಕಾರ ಸಹಭಾಗಿತ್ವವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಹಲವಾರು ಇಲಾಖೆಗಳ ಸಹಯೋಗದಲ್ಲಿ ಜನರಿಗೆ ಕಾರ್ಯಕ್ರಮ ಹಮ್ಮಿಕೊಂಡು ರಸ್ತೆ ಸಾರಿಗೆ ಸಪ್ತಾಹ, ಪೋಕ್ಸೋ, ಬಾಲ್ಯ ವಿವಾಹ ಮುಕ್ತ ಭಾರತ ಹೀಗೆ ವಿವಿಧ ಕಾನೂನುಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಸವೋಚ್ಛ ನ್ಯಾಯಲಯದ ನಿರ್ದೇಶನದ ಮೇರೆಗೆ ಬಾಲ್ಯ ವಿವಾಹ ಮುಕ್ತ ಭಾರತ ಮಾಡುವಲ್ಲಿ ಜಾಗೃತಿ ಮತ್ತು ತರಬೇತಿ ಕೆಲಸ ಮಾಡುತ್ತಿದ್ದು, ತಾವು ಕೂಡ ತಮ್ಮ ವ್ಯಾಪ್ತಿಯಲ್ಲಿ ಅರಿವು ಮೂಡಿಸಲು ನಿರ್ದೇಶನ ನೀಡಿದರು.


ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, ಬಂಧಿತ ಕಾರ್ಮಿಕರ ಮಕ್ಕಳ ರಕ್ಷಣಾ ಕಾರ್ಯಚರಣೆ ಮಾಡಿರುವುದು ನನ್ನ ಹೆಮ್ಮೆಯ ವಿಷಯ, ವಲಸೆ ಕಾರ್ಮಿಕರ ಕುರಿತು ಕೆಲಸ ನಿರ್ವಹಿಸಬೇಕು, ನಿಮ್ಮ ವ್ಯಾಪ್ತಿಯಲ್ಲಿ ಯಾವುದೇ ಮಗುವಿನ ಹಕ್ಕುಗಳ ಉಲ್ಲಂಘನೆಯಾದಲ್ಲಿ ನಮ್ಮ ಗಮನಕ್ಕೆ ತನ್ನಿ ಇಲಾಖೆಗಳು ನಿಮ್ಮ ಜೊತೆ ಯಾವಾಗಲು ಇರುತ್ತೇವೆ. ಇಂತಹ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.


ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸವಿತಾ ಕಾಳೆ ಅವರು ಮಾತನಾಡಿ, ಶೈಕ್ಷಣಿಕ, ವೈದ್ಯಕೀಯ ವ್ಯವಸ್ಥೆಯಿಂದ ಹೊರಗುಳಿದ ಮಕ್ಕಳ ವಿಕಲಚೇತನ ಮಕ್ಕಳು ಇದ್ದು ಅಂತಹವರನ್ನು ಶಾಲೆಗೆ ಮರಳಿ ದಾಖಲಿಸುವಂತೆ ಕೆಲಸ ನಿರ್ವಹಿಸುತ್ತೇವೆ. ಸಾಕಷ್ಟು ಪ್ರಕರಣ ಕೃತ್ಯಗಳು ವಿಶೇಷ ಚೇತನರ ಮಕ್ಕಳ ಮೇಲೆ ಆಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಇಂತಹ ತರಬೇತಿ ಕಾರ್ಯಾಗಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಹೆಚ್.ಹೆಚ್. ಕುಕನೂರ ಅವರು ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸಾಕಷ್ಟು ಜಾಗೃತಿ ತರಬೇತಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆದರೆ ಮಹಿಳಾ ಸಹಾಯವಾಣಿ 181 ಉಚಿತ ಸಹಾಯವಾಣಿಗೆ ಕರೆ ಮಾಡಿ, ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯವಾದರೆ ಶಕ್ತಿ ಸದನ ಯೋಜನೆ ಇದೆ ಇದರ ಸದುಪಯೋಗ ಪಡೆದುಕೊಳ್ಳಿ, ಅಕ್ಕ ಪಡೆ ನಾಲ್ಕು ಜನ ಗೃಹ ರಕ್ಷಕದಳ ಸಿಬ್ಬಂದಿ, 7 ರಿಂದ 10 ಘಂಟೆಗೆ ಮಕ್ಕಳು ಮತ್ತು ಮಹಿಳೆಯರಿಗೆ ತೊಂದರೆಯಾದಲ್ಲಿ ಅಕ್ಕಪಡೆಗೆ ಮಾಹಿತಿ ನೀಡಲು ತಿಳಿಸಿದರು. ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಶಿಶುಪಾಲನಾ ಕೇಂದ್ರದ ವ್ಯವಸ್ಥೆ ಇದೆ ಅದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.


ಕೊಪ್ಪಳದ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕ ಹರೀಶ ಜೋಗಿ ಅವರು ತರಬೇತುದಾರರಿಗೆ ಮಕ್ಕಳ ರಕ್ಷಣೆಗಾಗಿ ಇರುವ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆ ಕುರಿತು ಉಪನ್ಯಾಸ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಎಂ.ಕೆ ತಹಶಿಲ್ದಾರ ನಿರೂಪಿಸಿದರು ಹಾಗೂ ವಿಶಾಲಾ ಕಾನಪೇಟ ವಂದಿಸಿದರು.


ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ವಾಯ್ ಪಾಟೀಲ್, ಸದಸ್ಯೆ ನೂರಜಹಾನ ಕಿಲ್ಲೇದಾರ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ವಿನೋದ ಮುಕ್ತೆದಾರ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಭಾಗವಹಿಸಿದ್ದರು.