
ಚಿಂಚೋಳಿ: ಇಂದಿನ ವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕದ ಇತಿಹಾಸವನ್ನು ಅಧ್ಯಯನ ಮಾಡಿ, ಈ ಭಾಗದ ಮುಕ್ತಿಗಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಬೇಕು ಎಂದು ಕೇತಕಿ ಸಂಗಮೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಬಸವೇಶ ಪಾಟೀಲ ಹೇಳಿದರು.
ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿಕಾಸ ಅಕಾಡೆಮಿ ಕಲಬುರಗಿ, ಕೇತಕಿ ಸಂಗಮೇಶ್ವರ ಆಸ್ಪತ್ರೆ, ನವಭಾರತ ಶಿಕ್ಷಣ ಸಂಸ್ಥೆ ಚಂದಾಪುರ, ಪೂಜ್ಯ ಶ್ರೀ ಬಸವ ಮಾಚಿದೇವ ಶಿಕ್ಷಣ ಸಂಸ್ಥೆ ನಿಡಗುಂದಾ ಹಾಗೂ ಹಾರಕೂಡ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಕಾಸ ಅಕಾಡೆಮಿ ತಾಲೂಕ ಸಂಚಾಲಕ ಕಾಶೀನಾಥ ಮಡಿವಾಳ ಮಾತನಾಡಿ, ಪ್ರತಿ ವರ್ಷ ವಿವಿಧ ಸಂಘಟನೆಗಳ ಸಹಕಾರದಿಂದ ಇಂತಹ ಸ್ಪರ್ಧೆಗಳು ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕದ ಇತಿಹಾಸ ಅರಿವು ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ತಾಲೂಕಿನಿಂದ ಸುಮಾರು 300 ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಜೀವಕುಮಾರ ಪಾಟೀಲ, ಮಹೇಶ್ ಪತ್ತಾರ, ಮಲ್ಲಿಕಾರ್ಜುನ ಉಡಪಿ, ರಾಜೇಂದ್ರ ಪ್ರಸಾದ್, ವಿದ್ಯಾಸಾಗರ ಚಿಟ್ಟಾ, ಶಿವಕುಮಾರ ಪೆÇೀಲಕಪಳ್ಳಿ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಹಣಮಂತರಾಯ ಕಾರ್ಯಕ್ರಮವನ್ನು ನಿರೂಪಿಸಿದರು. ಗೋಪಾಲ ಸ್ವಾಗತಿಸಿದರು. ವಿಶ್ವನಾಥ ನಾಯನೂರ ವಂದಿಸಿದರು





















