ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ


ಲಕ್ಕುAಡಿ ಜೂ.೪: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.


ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು. ಇಲ್ಲಿ ದೊರೆತಿರುವ ಅವಶೇಷಗಳ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.


ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು. ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ, ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ, ಸಂಸದರಾದ ಪಿ.ಸಿ.ಗದ್ದಿಗೌಡರ, ಶಾಸಕರುಗಳಾದ ಸಿ.ಸಿ.ಪಾಟೀಲ, ಚಂದ್ರು ಲಮಾಣಿ,ಎನ್.ಎಸ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಲಕ್ಕುಂಡಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಕೆಂಚಪ್ಪ ಪೂಜಾರ, ಗ್ರಾಮ ಪಂಚಾಯತ ಉಪಾಧ್ಯಕ್ಷರು, ಸದಸ್ಯರುಗಳು, ಮಾಜಿ ಸಚಿವರಾದ ಎಸ್.ಎಸ್.ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ,ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ ಸಿ.ಇ.ಓ ಭರತ. ಎಸ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಗಣ್ಯರುಗಳು ಉಪಸ್ಥಿತರಿದ್ದರು.